No title

ಕಿಮ್ಮನೆ ಪಾದಯಾತ್ರೆ ಎರಡನೇ ದಿನ ಮುಕ್ತಾಯ

ಎರಡನೇ ದಿನ ಕಿಮ್ಮನೆ ರತ್ನಾಕರ್‌ ಪಾದಯಾತ್ರೆ ಬೆಜ್ಜವಳ್ಳಿಯಿಂದ ಮಂಡಗದ್ದೆ ವರೆಗೆ ಸುಮಾರು 17 ಕಿ.ಮಿ. ಕಾಲ್ನಡಿಗೆ ಮುಕ್ತಾಯಗೊಂಡಿದೆ. ಗುಡ್ಡೇಕೊಪ್ಪದಿಂದ ಹೊರಟ ಜನಸಂಖ್ಯೆ ಬೆಜ್ಜವಳ್ಳಿಯಲ್ಲಿ ಕಾಣಲಿಲ್ಲ. ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ಉತ್ಸಾಹದಿಂದಲೇ ಹೆಜ್ಜೆ ಹಾಕಿದ್ದಾರೆ.

ಮಂಡಗದ್ದೆಯಲ್ಲಿ ನಡೆದ ಸಭೆಯಲ್ಲಿ ಬಿಜೆಪಿ ಪಕ್ಷದ ದುರಾಡಳಿತ, ತೀರ್ಥಹಳ್ಳಿ ತಾಲ್ಲೂಕು ಕಚೇರಿಯ ಅಧಿಕಾರಿ ವರ್ಗ, ಅರಣ್ಯ ಇಲಾಖೆ ದೌರ್ಜನ್ಯ, ಮರಳು ಸೇರಿದಂತೆ ಅನೇಕ ವಿಚಾರಗಳನ್ನು ಪ್ರಸ್ತಾಪಿಸಿರು. ನಾಳೆ ಭಾನುವಾರ ಬೆಳಿಗ್ಗೆ ಮಂಡಗದ್ದೆಯಿಂದ ಹೊಸಳ್ಳಿಯವರಗೆ ಸುಮಾರು 15 ಕಿ.ಮೀ. ಪಾದಯಾತ್ರೆ ನಡೆಯಲಿದೆ. ಕೊನೆಯ ದಿನ 5 ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಸೇರುವ ನಿರೀಕ್ಷೆ ಇದೆ ಎಂದು ಕಾಂಗ್ರೆಸ್‌ ಮುಖಂಡರು ಅಭಿಪ್ರಾಯಪಡುತ್ತಾರೆ.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಶಬನಮ್‌, ಸದಸ್ಯರಾದ ಬಿ. ಗಣಪತಿ ಗೀತಾ ರಮೇಶ್‌, ಸುಶೀಲ ಶೆಟ್ಟಿ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಕೆಸ್ತೂರು ಮಂಜುನಾಥ, ಗ್ರಾಮಾಂತರ ಅಧ್ಯಕ್ಷ ಮುಡುಬ ರಾಘವೇಂದ್ರ, ಕೆಪಿಸಿಸಿ ಸದಸ್ಯ ಜಿ.ಎಸ್.‌ ನಾರಾಯಣ ರಾವ್‌, ಐವೈಸಿ ವಕ್ತಾರ ಆದರ್ಶ ಹುಂಚದಕಟ್ಟೆ, ಯುವ ಕಾಂಗ್ರೆಸ್‌ ಅಧ್ಯಕ್ಷರಾದ ಅಮರನಾಥ ಶೆಟ್ಟಿ, ಪುಟ್ಟೋಡ್ಲು ರಾಘವೇಂದ್ರ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಯಲ್ಲಪ್ಪ, ಮುಖಂಡರಾದ ಅಮ್ರಪಾಲಿ ಸುರೇಶ್‌, ಮೇಲಿನಕೊಪ್ಪ ಹರೀಶ್‌, ಡಿ.ಎಸ್.‌ ವಿಶ್ವನಾಥ ಶೆಟ್ಟಿ ಮುಂತಾದವರು ಇದ್ದರು. 

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post