ಮೃತ ಕೃಷಿ ಕಾರ್ಮಿಕ ಶಂಕರಪ್ಪ ಕುಟುಂಬಕ್ಕೆ 4 ಲಕ್ಷ ಚೆಕ್ ವಿತರಿಸಿ, ಧೈರ್ಯ‌ ತುಂಬಿದ ಗೃಹಸಚಿವ ಆರಗ ಜ್ಞಾನೇಂದ್ರ

4 ಲಕ್ಷ ಚೆಕ್ ವಿತರಿಸಿದ ಆರಗ ಜ್ಞಾನೇಂದ್ರ
ಹಳ್ಳಕ್ಕೆ ಬಿದ್ದು ಮೃತಪಟ್ಟ ರೈತ ಕಾರ್ಮಿಕ ಶಂಕರಪ್ಪ
ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವ
ಮೂರು ದಿನದ ಹಿಂದೆ ಮಳೆ ತಂದ ಅವಾಂತರ ಸರಿಪಡಿಸಲು ತೆರಳಿದ್ದ ರೈತ ಕಾರ್ಮಿಕ ಶಂಕರಪ್ಪ ಕುಟುಂಬಕ್ಕೆ ಸಾಂತ್ವಾನ ಹೇಳಿ ಗೃಹಸಚಿವ ಆರಗ ಜ್ಞಾನೇಂದ್ರ 4 ಲಕ್ಷ ರೂಪಾಯಿ ಚೆಕ್ ನೀಡಿದರು.
ರಾಜ್ಯದಲ್ಲಿ ಎರಡು ಮೂರು ದಿನ ಸುರಿದ ಮಳೆ ಕೋಲಾಹಲವನ್ನೇ ಎಬ್ಬಿಸಿದೆ. ಹಿಂದೆಂದೂ ಮೇ ತಿಂಗಳಲ್ಲಿ ಸುರಿಯದ ಮಳೆ ದೊಪ್ಪೆಂದು ಸುರಿದಿದೆ. ಮೇಘಾಸ್ಪೋಟದಿಂದ ಗದ್ದೆಯಲ್ಲಾದ ದುರಂತ ತಪ್ಪಿಸಲು ಹೋದ ಸಂದರ್ಭದಲ್ಲಿ ಮೇಲಿನ ತೂದೂರು ನಿವಾಸಿ ಶಂಕರಪ್ಪ ಗುರುವಾರ ಸಂಜೆ ಹಳ್ಳಕ್ಕೆ ಬಿದ್ದು ಮೃತಪಟ್ಟಿದ್ದರು. ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಮೃತರ ಕುಟುಂಬಕ್ಕೆ ಪರಿಹಾರ ಸಮೀಕ್ಷೆ ನಡೆಸಿದ್ದರು. ಶನಿವಾರ ಗೃಹಸಚಿವ ಆರಗ ಜ್ಞಾನೇಂದ್ರ ಮೃತರ ಮನೆಗೆ ತೆರಳಿ ಮೃತರ ಪತ್ನಿ, 8ನೇ ತರಗತಿ ಓದುತ್ತಿರುವ ಪುಟ್ಟ ಬಾಲಕನಿಗೆ ಧೈರ್ಯ ತುಂಬಿದರು. ಬಾಲಕನಿಗೆ ಉತ್ತಮ ಶಿಕ್ಷಣ ಕೊಡಿಸಲು ಆತನ ತಾಯಿಗೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಬೆಜೆಪಿ ಮುಖಂಡ ಆರ್. ಮದನ್, ತೂದೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಮಧುರಾಜ್ ಹೆಗ್ಡೆ, ತಹಸೀಲ್ದಾರ್ ಡಾ. ಶ್ರೀಪಾದ್, ರಾಜಸ್ವ ನಿರೀಕ್ಷಕ ಮಂಜುನಾಥ್ ಮುಂತಾದವರು ಇದ್ದರು.
ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post