ಕಿಮ್ಮನೆ ಪಾದಯಾತ್ರೆಗೆ ಆರಗ ಲೇವಡಿ

ನಾನು ಮಾಡಿಸಿದ ರಸ್ತೆಯಲ್ಲಿ ವಾಕಿಂಗ್...

ಕಿಮ್ಮನೆ ಪಾದಯಾತ್ರೆಗೆ ಆರಗ ಲೇವಡಿ
ಯಾವುದೇ ವಿಷಯಗಳು ಇಲ್ಲದಿದ್ದಾಗ ಕಿಮ್ಮನೆ ಆಗಾಗ ಪಾದಯಾತ್ರೆ ಮಾಡುತ್ತಾರೆ. ನಾನು ಇದ್ದೀನಿ ಅಂತಾ ಗೊತ್ತು ಮಾಡುವ ಪ್ರಯತ್ನ. ಅದರ ಬಗ್ಗೆ ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ. ಪಾದಯಾತ್ರೆಗೆ ಬೇಕಾದ ಸರಿಯಾದ ರಸ್ತೆ ಮಾಡಿಸಿದ್ದೇನೆ ಎಂದು ಕಾಲೆಳೆದಿದ್ದಾರೆ.
ಅವರ ಅವಧಿಯ 10 ವರ್ಷದಲ್ಲಿ ಅಭಿವೃದ್ಧಿ ಕೆಲಸ ಸತ್ತು ಹೋಗಿತ್ತು. ಅದನ್ನು ನಾನು ಮಾಡಿಸುತ್ತಿದ್ದೇನೆ. ಪಾದಯಾತ್ರೆ ಮಾಡೋದು ಅವರ ನಿತ್ಯದ ಕರ್ಮವಾಗಿದೆ ಎಂದು ಶಿವಮೊಗ್ಗದಲ್ಲಿ ತಿರುಗೇಟು ನೀಡಿದ್ದಾರೆ.

ಯತ್ನಾಳ್ ಹೇಳಿಕೆ ವಿಚಾರ ನಮ್ಮ ಹಿರಿಯರು ಗಮನಿಸುತ್ತಿದ್ದಾರೆ. ಯತ್ನಾಳ್ ಅವರು ನನ್ನ ಸ್ನೇಹಿತರು. ಅವರು ಈ ಹಿಂದೆ ಬಹಳ ಸ್ಟೇಟ್ ಮೆಂಟ್ ಕೊಟ್ಟಿದ್ದಾರೆ. ಹೀಗಾಗಿ ಅವರ ಹೇಳಿಕೆಗಳ ಬಗ್ಗೆ ತೀರಾ ತಲೆ ಕೆಡಿಸಿಕೊಳ್ಳುವ ಅವಶ್ಯಕತೆ ಇಲ್ಲ ಎಂದಿದ್ದಾರೆ.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post