ಸಿಂಹಳೀಯರ ನಾಡು ಶ್ರೀಲಂಕಾದಲ್ಲಿ ತಲೆದೋರಿರುವ ಆರ್ಥಿಕ ಸಂಕಷ್ಟವನ್ನು ನೀಗಿಸುವಲ್ಲಿ ವಿಫಲವಾದ ಕಾರಣ ಪ್ರಧಾನಿ ಹುದ್ದೆಗೆ ಮಹಿಂದಾ ರಾಜಪಕ್ಸ ರಾಜೀನಾಮೆ ನೀಡಿದ್ದಾರೆ. ಇದರ ಬೆನ್ನಲ್ಲೇ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ.ಕಳೆದ ಕೆಲ ದಿನಗಳ ಹಿಂದೆ ನಡೆದ ವಿಶೇಷ ಸಂಪುಟ ಸಭೆಯಲ್ಲಿ ಅಧ್ಯಕ್ಷ ಗೋಟಬಯ ರಾಜಪಕ್ಸ ಅವರು ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಲು ಮಹಿಂದಾ ರಾಜಪಕ್ಸ ಅವರ ಬಳಿಕ ಮನವಿ ಮಾಡಿದ್ದರು. ಇದಕ್ಕೆ ಮಹಿಂದಾ ರಾಜಪಕ್ಸ ಸಮ್ಮತಿ ಸೂಚಿಸಿದ್ದರು ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿದ್ದವು. ಇದರ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.
ಶ್ರೀಲಂಕಾದಲ್ಲಿ ಆರ್ಥಿಕ ಪರಿಸ್ಥಿತಿ ಹದಗೆಟ್ಟ ಕಾರಣಕ್ಕಾಗಿ ಜನರು ತೀವ್ರ ಪ್ರತಿಭಟನೆ ನಡೆಸಿದ್ದರು. ಇದಕ್ಕೆ ಅಲ್ಲಿನ ಮಾಜಿ ಕ್ರಿಕೆಟರ್ಸ್ ಸನತ್ ಜಯಸೂರ್ಯ, ಅರ್ಜುನ್ ರಣತುಂಗಾ ಸೇರಿದಂತೆ ಅನೇಕರು ಸಹ ಸಾಥ್ ನೀಡಿದ್ದರು.
Tags:
ಶ್ರೀಲಂಕಾ
_(cropped).jpg)
