ಕಾನೂನು ಕ್ರಮಕ್ಕೆ ಮುಡುಬ ಒತ್ತಾಯ

 ಮುಡುಬ ರಾಘವೇಂದ್ರ ಆಸ್ಪತ್ರೆ ಭೇಟಿ

ಆರಗ ಅತ್ಯಾಚಾರ ಯತ್ನ ಪ್ರಕರಣ

ಆರಗ ಸಮೀಪ ನಡೆದಿದೆ ಎನ್ನಲಾದ ಅತ್ಯಾಚಾರ ಯತ್ನ ಪ್ರಕರಣದಲ್ಲಿ ದೌರ್ಜನ್ಯಕ್ಕೆ ಒಳಗಾದ ದಂಪತಿಯನ್ನು ತೀರ್ಥಹಳ್ಳಿ ಗ್ರಾಮಾಂತರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ, ಯುವ ಮುಖಂಡ ಮುಡುಬ ರಾಘವೇಂದ್ರ ಭೇಟಿಯಾಗಿ ಸಾಂತ್ವಾನ ಹೇಳಿದರು.

ದೇಶದಲ್ಲಿ ಇಂತಹ ಪ್ರಕರಣಗಳು ಹೆಚ್ಚಾಗುತ್ತಿದೆ. ದೌರ್ಜನ್ಯಕ್ಕೆ ಒಳಗಾದವರು ಪ್ರಕರಣ ದಾಖಲಿಸುವ ಪ್ರಯತ್ನ ನಡೆಸಿದರು ಕಾಣದ ಕೈಗಳು ಮುಚ್ಚುವ ಪ್ರಯತ್ನದಲ್ಲಿ ತೊಡಗುತ್ತಿವೆ. ದೌರ್ಜನ್ಯಕ್ಕೆ ಒಳಗಾದವರು ಯಾರೇ ಆಗಿದ್ದರು ಅವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು. ದೌರ್ಜನ್ಯಕ್ಕೆ ಒಳಗಾದವರಿಗೆ ರಕ್ಷಣೆ ಒದಗಿಸುವ ಮೂಲಕ ನ್ಯಾಯ ಒದಗಿಸುವ ಕೆಲಸವನ್ನು ಆಡಳಿತ ಮಾಡಬೇಕು ಎಂದು ಒತ್ತಾಯಿಸಿದರು.

ದೌರ್ಜನ್ಯಕ್ಕೆ ಒಳಗಾಗಿರುವ ದಂಪತಿಗಳಿಗೆ ಹಣ್ಣುಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಕೆಸ್ತೂರು ಮಂಜುನಾಥ್‌, ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಯಲ್ಲಪ್ಪ ಮುಂತಾದವರು ಇದ್ದರು.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post