ಕರಾವಳಿಯಲ್ಲಿ ತೇಲಿ ಬಂತು ಚಿನ್ನದ ರಥ

ತೇಲಿ ಬಂತು ಚಿನ್ನದ ರಥ
ನೋಡಲು ಮುಗಿಬಿದ್ದ ಜನ

ಅಸಲಿ ಚಂಡಮಾರುತದ ಅಬ್ಬರಕ್ಕೆ ಆಂಧ್ರಪ್ರದೇಶದಾದ್ಯಂತ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದೆ. ಈ ನಡುವೆ ಸಮುದ್ರದಲ್ಲಿ ಚಿನ್ನದ ರಥವೊಂದು ಕಡಲಲ್ಲಿ ತೇಲಿ ಬಂದ ಘಟನೆ ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಸುನ್ನಪಲ್ಲಿ ಗ್ರಾಮದಲ್ಲಿ ನಡೆದಿದೆ.

ಕರಾವಳಿ ಕಡಲಲ್ಲಿ ತೇಲಿ ಬಂದ ಬಂಗಾರದ ಬಣ್ಣದ ರಥ ಕಂಡು ಗ್ರಾಮಸ್ಥರು ಅಚ್ಚರಿಗೊಂಡಿದ್ದಾರೆ. ಚಂಡಮಾರುತದ ಅಬ್ಬರಕ್ಕೆ ಸಮುದ್ರದಲ್ಲಿ ಬೃಹತ್ ಗಾತ್ರದ ಅಲೆಗಳು ಹೇಳುತ್ತಿದ್ದು ಚಂಡಮಾರುತದ ಹೊಡೆತಕ್ಕೆ ಸಿಲುಕಿ ಥೈಲಂಡ್, ಮೈನ್ಮಾರ್ ಅಥವಾ ದಕ್ಷಿಣಾಭಿಮುಖವಾಗಿರುವ ಪೂರ್ವ ದೇಶಗಳಿಂದ ಸಮುದ್ರದಲ್ಲಿ ತೇಲಿ ಬಂದಿರಬಹುದು ಎಂದು ಹೇಳಲಾಗುತ್ತಿದೆ.

ಸ್ಥಳೀಯ ಮೀನುಗಾರರು ರಥಕ್ಕೆ ಹಗ್ಗಕಟ್ಟಿ ರಥವನ್ನ ಸಮುದ್ರದಿಂದ ತಂದಿದ್ದಾರೆ. ಸಮೀಪವಿರುವ ಯಾವುದಾದರೂ ದೇಶದಿಂದ ಬಂದಿರಬಹುದು. ಮಲೇಶಿಯಾ, ಇಂಡೋನೇಶಿಯಾ ಸಮುದ್ರದಲ್ಲಿ ಕೊಚ್ಚಿಕೊಂಡು ಬಂದಿರಬಹುದು ಎಂದು ಅಧಿಕಾರಿಗಳು ಹೇಳುತ್ತಿದ್ದು, ಗುಪ್ತಚರ ಇಲಾಖೆಗೆ ಮಾಹಿತಿ ತಿಳಿಸಿರುವುದಾಗಿ ಆಧ್ರಪ್ರದೇಶದ ಪೊಲೀಸರು ತಿಳಿಸಿದ್ದಾರೆ.





ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post