ಹೈಕಮಾಂಡ್ ಬುಲಾವ್ - ದೆಹಲಿಗೆ ತೆರಳಿದ ಗೃಹಸಚಿವ

ರಾಜ್ಯ ರಾಜಕಾರಣ ದೆಹಲಿ ಅಂಗಳಕ್ಕೆ ಶಿಫ್ಟ್ ಆಗಿದೆ. ಮಹತ್ವದ ಬೆಳವಣಿಗೆಯಲ್ಲಿ ಗೃಹಸಚಿವ ಆರಗ ಜ್ಞಾನೇಂದ್ರ ಅವರು ದೆಹಲಿಗೆ ತೆರಳಿದ್ದಾರೆ.
ಇದು ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಹೈಕಮಾಂಡ್ ಬುಲಾವ್ ಮೆರೆಯಲ್ಲಿ ಗೃಹಸಚಿವರು ದೆಹಲಿಗೆ ತೆರಳಿದ್ದಾರೆ.
ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿಯಲ್ಲಿದ್ದು ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಚರ್ಚಿಸಿದ್ದಾರೆ. ಸಂಪುಟ ವಿಸ್ತರಣೆ ಕುರಿತು ಮಹತ್ವದ ಚರ್ಚೆಗಳು ನಡೆದಿವೆ. ಇದೇ ವೇಳೆಗೆ ಗೃಹಸಚಿವ ಆರಗ ಜ್ಞಾನೇಂದ್ರ ದೆಹಲಿ ತೆರಳಿರುವುದು ರಾಜ್ಯ, ಜಿಲ್ಲೆ ರಾಜಕಾರಣದಲ್ಲಿ ತೀವ್ರ ಕುತೂಹಲ ಸೃಷ್ಟಿಸಿದೆ.
ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post