ಕಿಮ್ಮನೆ ಪಾದಯಾತ್ರೆ ಮಾಹಿತಿ ಪಡೆದ ರಾಹುಲ್ ಗಾಂಧಿ

ಸಿಎಂ ಸಿದ್ದರಾಮಯ್ಯ‌ ಮೆಚ್ಚುಗೆಯ ಮಾತು

ಪೋನ್ ಮೂಲಕ ಕಿಮ್ಮನೆಗೆ ಸಿದ್ದು ಸಾಥ್
ಮಾಜಿ ಸಚಿವ ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ನಡೆದ ಪಾದಯಾತ್ರೆ ಮಂಗಳವಾರ ಶಿವಮೊಗ್ಗ ತಲುಪಿದೆ. ಐದು ದಿನಗಳ ನಿರಂತರ ಪಾದಯಾತ್ರೆ ನಡೆಸಿದ ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಜನಧ್ವನಿ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡರು. ಈ ನಡುವೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಮ್ಮನೆಗೆ ದೂರವಾಣಿ ಕರೆ ಮಾಡಿ ಚರ್ಚೆ ನಡೆಸಿದ್ದಾರೆ.
ಸರ್ಕಾರದ ಆಡಳಿತ ವೈಫಲ್ಯ, ಪಿಎಸ್ಐ ನೇಮಕಾತಿ ಹಗರಣ ತನಿಖೆಗೆ ಆಗ್ರಹಿಸಿ ಪಾದಯಾತ್ರೆ ನಡೆಸಲಾಯಿತು. ಗೃಹಸಚಿವ ಆರಗ ಜ್ಞಾನೇಂದ್ರ ಅವರ ತವರೂರು ತೀರ್ಥಹಳ್ಳಿ ತಾಲೂಕಿನ ಗುಡ್ಡೆಕೊಪ್ಪ ಗ್ರಾಮದಿಂದ ಆರಂಭವಾಗಿದ್ದ ಪಾದಯಾತ್ರೆ ಇವತ್ತು ಶಿವಮೊಗ್ಗ ತಲುಪಿತು. ದೊಡ್ಡ ಸಂಖ್ಯೆಯ ಕಾರ್ಯಕರ್ತರೊಂದಿಗೆ ಕಿಮ್ಮನೆ ರತ್ನಾಕರ್ ಅವರು ಶಿವಮೊಗ್ಗಕ್ಕೆ ಆಗಮಿಸಿದ್ದರು. ಹರಕೆರೆಯಿಂದ ಹೊರಟ ಪಾದಯಾತ್ರೆ ಶಿವಮೊಗ್ಗ ಬಸ್ ನಿಲ್ದಾಣದ ಬಳಿ ಪ್ರತಿಭಟನಾ ಮೆರವಣಿಗೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಘೋಷಣೆ ಕೂಗಿದ್ದರು.
ಸಿದ್ದರಾಮಯ್ಯ ಫೋನ್ ಕರೆ
ಇತ್ತ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ಮಾಡಿದ್ದಾರೆ. ಪಾದಯಾತ್ರೆ ಮಾಡಿದ್ದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ರಾಹುಲ್ ಗಾಂಧಿ ಅವರು ಕೂಡ ಕಿಮ್ಮನೆ ರತ್ನಾಕರ್ ಅವರ ಪಾದಯಾತ್ರೆ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post