ರೈತ ನಾಯಕ ರಾಕೇಶ್‌ ಟಿಕಾಯತ್‌ ಮೇಲೆ ಹಲ್ಲೆ

ಜೈ ಮೋದಿ ಎಂದು ಹಲ್ಲೆಗೆ ಯತ್ನ

ಬಿಜೆಪಿ ಕಾರ್ಯಕತ್ರರು ಎಂಬ ಗುಮಾನಿ

ರಾಕೇಶ್‌ ಟಿಕಾಯತ್

ರೈತ ನಾಯಕ ರಾಕೇಶ್ ಟಿಕಾಯತ್ ಮೇಲೆ ಸೋಮವಾರ ಬೆಂಗಳೂರಿನ ಗಾಂಧಿ ಭವನದಲ್ಲಿ ಮಸಿ ಎರಚಿ ಹಲ್ಲೆ ನಡೆಸಲು ಯತ್ನಿಸಲಾಗಿದೆ. ಹಸಿರು ಶಾಲು ಧರಿಸಿ ರೈತರ ಸೋಗಿನಲ್ಲಿ ಒಳಗೆ ನುಗ್ಗಿದ ಕಿಡಿಗೇಡಿಗಳು ಜೈ ಮೋದಿ ಎಂದು ಕೂಗಿ ಹಲ್ಲೆಗೆ ಹತ್ನಿಸಿದ ಕಾರಣ ಅವರು ಬಿಜೆಪಿ ಕಾರ್ಯಕರ್ತರಾಗಿರಬಹುದು ಎಂಬ ಸಂದೇಹ ವ್ಯಕ್ತವಾಗಿದೆ. ಮಸಿ ಎರಚಿ ಹಲ್ಲೆಗೆ ಯತ್ನಸಿದಾಕ್ಷಣ ಎಚ್ಚೆತ್ತುಕೊಂಡ ರೈತರು ಪ್ರತಿದಾಳಿ ನಡೆಸಿ ಕಿಡಿಗೇಡಿ ವಿರುದ್ದ ಸರಿಯಾಗಿ ಗೂಸಾ ನೀಡಿ ಅಲ್ಲಿಂದ ಓಡಿಸಿದ್ದಾರೆ.

ಆದರೆ ರಾಷ್ಟ್ರಮಟ್ಟದಲ್ಲಿ ಓರ್ವ ಪ್ರತಿಷ್ಠಿತ ಹಾಗೂ ಪ್ರಭಾವಿ ರೈತ ಮುಖಂಡನಾಗಿದ್ದು ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರುದ್ದ ನಿರಂತರ ಒಂದು ವರ್ಷಗಳ ಕಾಲ ದೆಹಲಿಯಲ್ಲಿ ಹೋರಾಟ ನಡೆಸಿ ಜಗತ್ತಿನ ಗಮನ ಸೆಳೆದಿದ್ದ ರಾಕೇಶ್‌ ಟಿಕಾಯತ್‌ ಮೇಲೆ ಮಸಿ ಎರಚಿ ಹಲ್ಲೆಗೆ ಯತ್ನಿಸಿರುವುದು ರಾಷ್ಟ್ರದಾದ್ಯಂತ ಸುದ್ದಿಯಾಗಿದೆ. ಮೊದಲೇ ಪಠ್ಯ ಪರಿಷ್ಕರಣೆ ಮತ್ತು ಕುವೆಂಪು ಅವಹೇಳನದಿಂದ ಎದ್ದಿರುವ ಅಸಮಾಧಾನದಿಂದ ಹೈರಾಣಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರಕ್ಕೆ ಮತ್ತೊಂದು ಸಂಕಷ್ಟ ತಂದೊಡ್ಡಿದೆ.‌



ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post