ಚತುರ್ವಳಿ ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ

ಚತುರ್ವಳಿ ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ
ಸರ್ಜಿ ಆಸ್ಪತ್ರೆಯಲ್ಲಿ ವಿಸ್ಮಯ
ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ

ರಾಜ್ಯದ ಮಕ್ಕಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಒಂದಾಗಿರುವ ಶಿವಮೊಗ್ಗದ ಸರ್ಜಿ ಆಸ್ಪತ್ರೆಯಲ್ಲಿ ಚತುರ್ವಳಿ ಮಕ್ಕಳು ಏಕಕಾಲದಲ್ಲಿ ಸೋಮವಾರ ಜನಿಸಿವೆ.

 ಬೆಳಿಗ್ಗೆ ಅಲ್ಮಾಜ್ ಬಾನು‌ ಎನ್ನುವವರು ನಾಲ್ಕು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಎರಡು ಗಂಡು, ಎರಡು ಹೆಣ್ಣು ಮಕ್ಕಳು ಜನಿಸಿವೆ. ಮಕ್ಕಳು ತೂಕ 1.1, 1.2, 1.3, 1.8 ಕೆಜಿ ಹೊಂದಿವೆ. ಅಲ್ಮಾಜ್ ಅವರು ಭದ್ರಾವತಿ ತಾಲೂಕು ತಡಸ ಗ್ರಾಮದ ಆರೀಫ್ ಅವರತ್ನಿ.

ಬಾಣಂತಿ ಹಾಗೂ ಮಕ್ಕಳು ಆರೋಗ್ಯವಾಗಿವೆ. ಆಸ್ಪತ್ರೆ ವೈದ್ಯರು ಮಕ್ಕಳು, ತಾಯಿಯ ಮೇಲೆ ನಿಗಾ ಇಟ್ಟಿದ್ದಾರೆ ಎಂದು ಸರ್ಜಿ ಆಸ್ಪತ್ರೆ ನಿರ್ದೇಶಕರಾದ ನಮಿತಾ ಸರ್ಜಿ ತಿಳಿಸಿದ್ದಾರೆ.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post