ಯುಪಿಎಸ್‌ಸಿ ಫಲಿತಾಂಶ ಪ್ರಕಟ

ಶೃತಿ ಶರ್ಮಾ ಮೊದಲ ರ್‍ಯಾಂಕ್

ಶುಭ ಹಾರೈಸಿದ ನರೇಂದ್ರ ಮೋದಿ
ಕೇಂದ್ರ ಲೋಕಸೇವಾ ಆಯೋಗ, 2021ನೇ ಸಾಲಿನ ಫಲಿತಾಂಶವನ್ನು ಪ್ರಕಟಿಸಿದೆ. ನಾಗರಿಕ ಸೇವಾ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಶೃತಿ ಶರ್ಮಾ ಮೊದಲನೆ ರ್‍ಯಾಂಕ್ ಪಡೆದರೆ, ಅನಿಕೇತ್ ಅಗರ್‌ವಾಲ್ 2ನೇ ರ್‍ಯಾಂಕ್ ಗಳಿಸಿದ್ದಾರೆ. ಗಾಮಿನಿ ಸಿಂಗಾಲ್ ಮೂರನೆ ರ್‍ಯಾಂಕ್ ಪಡೆದಿದ್ದಾರೆ ಎಂದು ಯುಪಿಎಸ್‌ಸಿ ಪ್ರಕಟಣೆ ತಿಳಿಸಿದೆ.
ಲೋಕಸೇವಾ ಆಯೋಗದ ಪರೀಕ್ಷೆಯಲ್ಲಿ 685ವಿದ್ಯಾರ್ಥಿಗಳು ಅರ್ಹತೆ ಪಡೆದಿದ್ದಾರೆ. ಸಾಮಾನ್ಯ ವರ್ಗದ 244, ಆರ್ಥಿಕವಾಗಿ ಹಿಂದುಳಿದ ವರ್ಗದ 73, ಹಿಂದುಳಿದ ವರ್ಗದ203, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ 60 ಅಭ್ಯರ್ಥಿಗಳು ತೇರ್ಗಡೆಯಾಗಿದ್ದಾರೆ. ಕೇಂದ್ರ ಲೋಕಸೇವಾ ಆಯೋಗದ ಪರೀಕ್ಷೆಯಲ್ಲಿ ರ್‍ಯಾಂಕ್ ಗಳಿಸಿದ ವಿದ್ಯಾರ್ಥಿಗಳನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.
ಯುವಪೀಳಿಗೆಯು ಆಡಳಿತ ಸೇವೆಯಲ್ಲಿ ಪ್ರಮುಖಪಾತ್ರ ವಹಿಸಲಿದ್ದು, ಆಜಾದಿ ಕಾ ಅಮೃತ ಮಹೋತ್ಸವ್ ಸಂದರ್ಭದಲ್ಲಿ ದೇಶ ಅಭಿವೃದ್ಧಿ ಪಥದತ್ತ ಮುನ್ನಡೆ ಸಾಧಿಸಲು ಯುವಕರು ಮುಂದಾಗಬೇಕು ಎಂದು ಟ್ವೀಟ್ ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ.
ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post