ಬಿಇಓ ಅನಂದ ಕುಮಾರ್‌ ಅವರಿಂದ ವಿದ್ಯಾರ್ಥಿಗಳಿಗೆ ಗೌರವ

ಸಾಧನೆ ಗೈದ ವಿದ್ಯಾರ್ಥಿಗಳಿಗೆ ಅಭಿನಂದನೆ
ಶಿಕ್ಷಣ ಇಲಾಖೆಯಿಂದ ಗೌರವ ಸಮರ್ಪಣೆ
ಬಿಇಓ ಆನಂದಕುಮಾರ್‌ರಿಂದ ಸನ್ಮಾನ ಶುರು

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಫಲಿತಾಂಶ ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸುವ ಮೂಲಕ ಪ್ರೇರಣೆ ನೀಡುವ ಕಾರ್ಯವನ್ನು ಕ್ಷೇತ್ರ ಶಿಕ್ಷಣ ಇಲಾಖೆ ಆರಂಭಿಸಿದೆ. ಜಿಲ್ಲೆಯಲ್ಲೂ ಸತತ 3ನೇ ವರ್ಷ ಪರೀಕ್ಷೆ ಫಲಿತಾಂಶದಲ್ಲಿ ಪ್ರಥಮ ಸ್ಥಾನ ಪಡೆಯಲು ಕಾರಣವಾಗಿರುವ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಅಭಿನಂದನೆ ಸಲ್ಲಿಸಿದೆ.

ಸೋಮವಾರ ಬಿಇಓ ಆನಂದಕುಮಾರ್‌ ತೀರ್ಥಹಳ್ಳಿಯ ವಾಗ್ದೇವಿ ಆಂಗ್ಲ ಮಾಧ್ಯಮ ಶಾಲೆಗೆ ಭೇಟಿ ನೀಡಿ 625ಕ್ಕೆ 625 ಅಂಕ ಪಡೆದ ಸೃಷ್ಟಿ ಜೆ, 624 ಅಂಕ ಪಡೆದ ಮಹಮದ್‌ ನಿಹಾಲ್‌ ಷರೀಪ್‌, 623 ಅಂಕ ಪಡೆದ ತನ್ಮಯಿ ಡಿ.ಸಿ, ಅವರನ್ನು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಸತ್ಪಥ ಎಜುಕೇಷನ್‌ ಟ್ರಸ್ಟ್‌ ಅಧ್ಯಕ್ಷ ಜಗದೀಶ್‌ ಕೊಡಸಗೊಳ್ಳಿ, ಶಿಕ್ಷಕರು, ಪೋಷಕರು ಪಾಲ್ಗೊಂಡಿದ್ದರು.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post