ಡಿ.ಎಸ್. ನಾಗಭೂಷಣ್ ಇನ್ನಿಲ್ಲ

ನಂದಿದ ಸಮಾಜವಾದಿ ಬೆಳಕು
ಹಿರಿಯ ಸಮಾಜವಾದಿ, ಗಾಂದಿ ಚಿಂತಕ, ಆಳ ಅಧ್ಯಯನ ಉಳ್ಳ ಲೇಖಕ ಡಿ.ಎಸ್. ನಾಗಭೂಷಣ್ ಅವರು ಬುಧವಾರ ಮಧ್ಯರಾತ್ರಿ 12.15ಕ್ಕೆ ನಿಧನ ಹೊಂದಿದ್ದಾರೆ.
ಗಣಿತ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದ ಡಿ.ಎಸ್.ನಾಗಭೂಷಣ ಅವರು 1952 ಫೆಬ್ರವರಿ 1 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಹೊಸಕೋಟೆ ತಾಲ್ಲೂಕಿನ ತಿಮ್ಮಸಂದ್ರದಲ್ಲಿ ಜನಿಸಿದರು. ದೆಹಲಿ ಆಕಾಶವಾಣಿಯಲ್ಲಿ ಕನ್ನಡ ವಾರ್ತಾ ವಾಚಕರಾಗಿ 1975ರಿಂದ 1981ರವರೆ ಸೇವೆ ಸಲ್ಲಿಸಿದ್ದ ಅವರು ಆನಂತರದಲ್ಲಿ ಸಹಾಯಕ ನಿಲಯ ನಿರ್ದೇಶಕರಾಗಿ 7 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. 2005ರಲ್ಲಿ ವೃತ್ತಿಯಿಂದ ಸ್ವಯಂ ನಿವೃತ್ತಿ ಪಡೆದರು.
ಓದು, ಬರವಣಿಗೆಯನ್ನು ಹವ್ಯಾಸವಾಗಿಸಿಕೊಂಡಿರುವ ಅವರು ‘ಇಂದಿಗೆ ಬೇಕಾದ ಗಾಂಧಿ’, ‘ಲೋಹಿಯಾ ಜೊತೆಯಲ್ಲಿ’, ‘ರೂಪ ರೂಪಗಳನು ಧಾಟಿ’, ‘ಕುವೆಂಪು ಒಂದು ಪುನರನ್ವೇಷಣೆ’, ‘ಕುವೆಂಪು ಸಾಹಿತ್ಯ ದರ್ಶನ’, ‘ಜಯ ಪ್ರಕಾಶ ನಾರಾಯಣ ಒಂದು ಅಪೂರ್ಣ ಕ್ರಾಂತಿಯ ಕಥೆ’, ‘ನಮ್ಮ ಶಾಮಣ್ಣ’, ‘ಕನ್ನಡದ ಮನಸು ಮತ್ತು ಇತರ ಲೇಖನಗಳು’. ಹಾಗೂ ‘ಕಾಲಕ್ರಮ’, ‘ಗಮನ’, ‘ಅನೇಕ’, ‘ಈ ಭೂಮಿಯಿಂದ ಆ ಆಕಾಶದವರೆಗೆ’, ‘ಮರಳಿ ಬರಲಿದೆ ಸಮಾಜವಾದ’, ‘ವಸಿಷ್ಠರು ಮತ್ತು ವಾಲ್ಮೀಕಿಯರು’, ‘ಹಣತೆ’(ಜಿಎಸ್ಸೆಸ್ ಅಭಿನಂದನೆ ಗ್ರಂಥ), ‘ಗಾಂಧಿ ಕಥನ’ ಸೇರಿದಂತೆ ಹಲವು ಮಹತ್ವದ ಕೃತಿಗಳನ್ನು ರಚಿಸಿದ್ದಾರೆ.
ಸಮಾಜವಾದಿ ನೆಲ ಶಿವಮೊಗ್ಗದಲ್ಲಿ ಹಲವು ವರ್ಷಗಳಿಂದ ನೆಲೆಸಿದ್ದರು. ಜಿಲ್ಲೆಯ ಹೋರಾಟಗಳನ್ನು ಸಾಕ್ಷೀಭೂತವಾಗಿ ಯುವ ಉತ್ಸಾಹಿಗಳಿಗೆ ಪರಿಚಯಿಸುವ ಬಗೆ ವಿಸ್ಮಯವನ್ನುಂಟು ಮಾಡಿದೆ. ಶಿಬಿರಗಳ ಮೂಲಕವೂ ಜ್ಞಾನ ಪ್ರಸಾರಣೆ ಕಾರ್ಯಕ್ರಮ ರೂಪಿಸಿದ್ದರು.
ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post