ಮುಖತಹ ಭೇಟಿಯಾಗೋಣ - ಕಿಮ್ಮನೆಯೊಂದಿಗೆ ಹೆಜ್ಜೆ ಹಾಕೋಣ: ಅಮ್ರಪಾಲಿ ಸುರೇಶ್

 

ಬಿಜೆಪಿ ಸರ್ಕಾರದ ದುರಾಡಳಿತ ಹಾಗೂ ಪಿಎಸ್ಐ ನೇಮಕಾತಿಯಲ್ಲಿ ನಡೆದಿರುವ ನೂರಾರು ಕೋಟಿಯ ಅವ್ಯಹಾರದ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ನಿಸ್ಪಕ್ಷಪಾತ ತನಿಖೆ ನಡೆಸಲು ಅವಕಾಶ ನೀಡಬೇಕೆಂದು ಆಗ್ರಹಿಸಿ ಹಮ್ಮಿಕೊಂಡಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಕಾಂಗ್ರೆಸ್‌ ಮುಖಂಡ ಅಮ್ರಪಾಲಿ ಸುರೇಶ್‌ ಹೇಳಿಕೆ ನೀಡಿದ್ದಾರೆ.

ಅಸಲಿ ಹೆಗ್ಗಣಗಳು ಬಿಲ ಬಿಟ್ಟು ಹೊರಗೆ ಹೊರಡಲಾರವು, ಎರೇ ಹುಳಗಳನ್ನು ಬಂಧಿಸಿ ಕಂಬಿ ಒಳಗೆ ಇಡುವುದನ್ನು ಖಂಡಿಸುವ ಸಲುವಾಗಿ ಮಾಜಿ ಸಚಿವ ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ಪಾದಯಾತ್ರೆ ನಡೆಸುತ್ತಿದ್ದಾರೆ. ಗುಡ್ಡೇಕೊಪ್ಪದಿಂದ ಹೊರಟ ಪಾದಯಾತ್ರೆ ಹರಕೆರೆ ತಲುಪಿದೆ. ಮಂಗಳವಾರ ಹರಕೆರೆಯಿಂದ ಪಾದಯಾತ್ರೆ ಶಿವಮೊಗ್ಗದಲ್ಲಿ ನಡೆಯುತ್ತಿರುವ ಬೃಹತ್‌ ಪ್ರತಿಭಟನಾ ಸಭೆ ಸೇರಲಿದೆ. ಈ ಸಭೆಗೆ ರಾಜ್ಯ ನಾಯಕರಾದ ಕೆಪಿಸಿಸಿ ಆಧ್ಯಕ್ಷ ಡಿ.ಕೆ. ಶಿವಕುಮಾರ್‌, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಭಾಗವಹಿಸುತ್ತಿದ್ದಾರೆ.

ನಾಲ್ಕು ದಿನಗಳ ಪಾದಯಾತ್ರೆ ಯಶಸ್ವಿಯಾಗಿ ಜರುಗಿದೆ. ಕೊನೆಯ ದಿನದ ಪಾದಯಾತ್ರೆ ಹರಕೆರೆಯ ಶಿವದೇವಸ್ಥಾನ ಮುಂಭಾಗದಿಂದ ಬೆಳಿಗ್ಗೆ 10 ಗಂಟೆಗೆ ಹೊರಡಲಿದ್ದು ಕಾಂಗ್ರೆಸ್‌ ಮುಖಂಡರು, ಕಾರ್ಯಕತ್ರರು ಭಾಗವಹಿಸುವಂತೆ ಅಮ್ರಪಾಲಿ ಸುರೇಶ್‌ ಆಹ್ವಾನಿಸಿದ್ದಾರೆ.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post