ವಾಲಿಬಾಲ್ ಪಂದ್ಯದಲ್ಲಿ ಅಡಿಕೆ ರೇಟು ಹೇಳಿ ಸಂಭ್ರಮಿಸಿದ ಗೃಹಸಚಿವ

ವಾಲಿಬಾಲ್‌ ಪಂದ್ಯದಲ್ಲಿ ಅಡಕೆ ಮಾತು
ರೇಟು ಹೇಳಿ ಸಂಭ್ರಮಿಸಿದ ಗೃಹಸಚಿವ ಆರಗ ಜ್ಞಾನೇಂದ್ರ
ಮಲೆನಾಡು ವಾಲಿಬಾಲ್‌ ಒಕ್ಕೂಟದ ಆಶ್ರಯದಲ್ಲಿ ತೀರ್ಥಹಳ್ಳಿ ತಾಲ್ಲೂಕಿನ ಕುಡುಮಲ್ಲಿಗೆಯಲ್ಲಿ ಮಲೆನಾಡು ಲೀಗ್-5 ವಾಲಿಬಾಲ್‌ ಪಂದ್ಯಾವಳಿಯನ್ನು ಹಿರಿಯ ವಾಲಿಬಾಲ್‌ ಆಟಗಾರ ಬಸವಾನಿ ಕವಿರಾಜ್‌ ಉದ್ಘಾಟಿಸಿದರು. ಬೆಂಗಳೂರಿನಲ್ಲಿ 4 ಲೀಗ್ ಪಂದ್ಯ ಮುಗಿಸಿದೆ. ಕ್ರೀಡಾಕೂಟದಲ್ಲಿ 10 ತಂಡಗಳು ಭಾಗವಹಿಸಿದ್ದವು. ಮುಖ್ಯ ಅತಿಥಿಯಾಗಿ ಗೃಹಸಚಿವ ಆರಗ ಜ್ಞಾನೇಂದ್ರ ಮಾತನಾಡಿದರು.
“ಮಲೆನಾಡಿನ ಜೀವನದಲ್ಲಿ ಹಾಸು ಹೊಕ್ಕಾಗಿರುವ ಅಡಿಕೆಗೆ ಉತ್ತಮ ಧಾರಣೆ ನೀಡುವ ಉದ್ದೇಶದಿಂದ ನಿರಂತರ ಪ್ರಯತ್ನಿಸಿದ್ದೇನೆ. ಅಡಿಕೆ ಬೆಳೆಯುವ ನಮ್ಮೂರಿನ ರೈತರ ಸಂತೋಷದಿಂದ ಕಾಲ ಕಳೆಯುವಂತಾಗಬೇಕು. ಉತ್ತಮ ದರ ನಿಗದಿಯಾಗಿದ್ದರಿಂದ ಹಳ್ಳಿಯಲ್ಲೇ ರಾಜ್ಯ ಮಟ್ಟದ ಕ್ರೀಡಾಕೂಟ ಏರ್ಪಡಿಸಲಾಗಿದೆ. ಕ್ರೀಡೆಗೂ ಪ್ರೋತ್ಸಾಹ ಸಿಗುತ್ತಿದೆ ಎಂಬ ಸಂತೋಷ ನನಗೆ. ಅಡಿಕೆ ರೇಟು ಕ್ರೀಡಾ ಚಟುವಟಿಕೆಗೆ ಪೂರಕ” ಎಂದು ಸಂಭ್ರಮಿಸಿದ್ರು.
ಕಾರ್ಯಕ್ರಮದಲ್ಲಿ ಸಾಲೆಕೊಪ್ಪ ರಾಮಚಂದ್ರ, ಬೇಗುವಳ್ಳಿ ಸತೀಶ್‌, ಗೀತಾ ಶೆಟ್ಟಿ ಮುಂತಾದವರು ಭಾಗವಹಿಸಿದ್ದರು.
ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post