ಮಂಜುನಾಥ ಗೌಡರ ಪೂರ್ವಭಾವಿ ಸಭೆ

ಕಾರ್ಯಕರ್ತರೊಂದಿಗೆ ಮಂಜುನಾಥ‌ ಗೌಡರ ಸಂವಾದ
ಎಷ್ಟು ಜನರು ಪಾಲ್ಗೊಳ್ಳಬಹುದು...?
ಶಿವಮೊಗ್ಗದಲ್ಲಿ ಮಂಗಳವಾರ ನಡೆಯುವ ಪ್ರತಿಭಟನೆಯ ಪೂರ್ವಭಾವಿ ಸಭೆಯು ಕಾಂಗ್ರೆಸ್ ಮುಖಂಡ ಡಾ. ಆರ್.ಎಂ
ಮಂಜುನಾಥ ಗೌಡರ ಬೆಟ್ಟಮಕ್ಕಿ ನಿವಾಸದಲ್ಲಿ ಭಾನುವಾರ ನಡೆಯಿತು.
ಕೇಂದ್ರ ಹಾಗೂ ರಾಜ್ಯ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ನಡೆಯುತ್ತಿರುವ ಪ್ರತಿಭಟನಾ ಸಭೆಯ ರೂಪುರೇಷೆಗಳ ಬಗ್ಗೆ ಚರ್ಚಿಸಲಾಯಿತು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಯಕತ್ವದಲ್ಲಿ  ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಜಗೊಳ್ಳಲಿದ್ದಾರೆ. ಶಿವಮೊಗ್ಗಕ್ಕೆ ಕರೆದುಕೊಂಡು ಹೋಗುವ ಜವಾಬ್ದಾರಿಯನ್ನು ಪ್ರಮುಖ ಕಾರ್ಯಕರ್ತರಿಗೆ ನೀಡಲಾಯಿತು.
ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post