ನಿವೃತ್ತ ನೌಕರರ ಘಟಕ ರಚನೆಗೆ ಚಿಂತನೆ

ಜಿಲ್ಲಾ ನಿವೃತ್ತ ನೌಕರರ ವೇದಿಕೆಯಲ್ಲಿ ಡಿಕೆಶಿ

ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ಮಂಗಳವಾರ ಜಿಲ್ಲಾ ನಿವೃತ್ತ ನೌಕರರ ವೇದಿಕೆ ಆಯೋಜಿಸಿದ್ದ ಡಿ.ಕೆ. ಶಿವಕುಮಾರ್‌ ಅವರೊಂದಿಗೆ ಸಂವಾದ ಮತ್ತು ಅಭಿನಂದನಾ ಕಾರ್ಯಕ್ರಮದಲ್ಲಿ ನಡೆಯಿತು.

ರಾಜ್ಯ ಕಾಂಗ್ರೆಸ್‌ ನಿವೃತ್ತ ಅಧಿಕಾರಿಗಳು ಮತ್ತು ನೌಕರರಿಗಾಗಿ ಪ್ರತ್ಯೇಕ ಘಟಕ ಮಾಡುವ ಆಲೋಚನೆ ಬಂದಿದೆ. ನಿವೃತ್ತ ಅಧಿಕಾರಿಗಳು ಕಾಂಗ್ರೆಸ್‌ ಪಕ್ಷವನ್ನು ಬೆಂಬಲಿಸಿರುವುದನ್ನು ನೋಡಿದಾಗ ಸಂತಸವಾಗಿದೆ. ಹೀಗಾಗಿ  ರಾಜ್ಯಮಟ್ಟದಲ್ಲಿ ಪಕ್ಷದಲ್ಲಿ ಅವರಿಗಾಗಿ ಪ್ರತ್ಯೇಕ ರಚನೆ ಮಾಡಿ ಅವರಿಗೆ ಸ್ಥಾನಮಾನ ಒದಗಿಸಲಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್‌, ಅಪೆಕ್ಸ್‌ ಬ್ಯಾಂಕ್‌ ಮಾಜಿ ಅಧ್ಯಕ್ಷ, ಕಾಂಗ್ರೆಸ್‌ ಮುಖಂಡ ಆರ್.ಎಂ. ಮಂಜುನಾಥ ಗೌಡ, ಜಿಲ್ಲಾ ನಿವೃತ್ತ ನೌಕರರ ವೇದಿಕೆಯ ಎನ್.‌ಎಸ್.‌ಕುಮಾರ್‌, ನಿಂಗಪ್ಪ, ಚಂದ್ರಶೇಖರ್‌ ಇದ್ದರು.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post