ಅಕ್ರಮ ಬಂದೂಕು ತಯಾರಿ, ಮಾರಾಟ - ಮಾಳೂರು ಠಾಣೆಯಲ್ಲಿ ಇಬ್ಬರ ವಿಚಾರಣೆ

ಅಕ್ರಮ ಬಂದೂಕು ಮಾರಾಟ

ಮಾಳೂರು ಠಾಣೆಯಲ್ಲಿ ವಿಚಾರಣೆ

ಪ್ರಕರಣ ಮುಚ್ಚಲು ಗೃಹಸಚಿವರ ಆಪ್ತರ ಹರಸಾಹಸ

ಕಳ್ಳ ನಾಡಬಂದೂಕು ಮಾರಾಟ ಜಾಲ ಬಹಿರಂಗವಾಗುವ ಸಾಧ್ಯತೆ

ಪೊಲೀಸರು ಕ್ರಮ ಕೈಗೊಳ್ಳುವರೇ...?
ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಅಕ್ರಮ ನಾಡ ಬಂದೂಕು ದಾಸ್ತಾನು ಮತ್ತು ಮಾರಾಟ ಜಾಲ ಕಾರ್ಯನಿರ್ವಹಿಸುತ್ತಿದೆ. ಭದ್ರಾವತಿ ಗ್ರಾಮಾಂತರ ಪೊಲೀಸರು ಶೋಧ ನಡೆಸಿದಾಗ ಶಂಕರಘಟ್ಟ ನಿವಾಸಿ ಪಾಲಾಕ್ಷಪ್ಪ (47) ಬಳಿ ಸುಮಾರು ವಿವಿಧ ಮಾದರಿಯ 9 ನಾಡ ಬಂದೂಕು ಲಭ್ಯವಾಗಿದೆ.
ಪಾಲಕ್ಷಪ್ಪನ ವಿಚಾರಣೆ ವೇಳೆ ತೀರ್ಥಹಳ್ಳಿ ತಾಲ್ಲೂಕಿನ ಮಂಡಗದ್ದೆ ಸಮೀಪದ ಹಳಗ ಗ್ರಾಮದ ಮನೋಜ್ (26) ಕೃಷ್ಣಮೂರ್ತಿ (46) ಅವರ ಹೆಸರು ಹೊರಗೆ ಬಂದಿದ್ದು ಹೆಚ್ಚನ ವಿಚಾರಣೆ ನಡೆಸಲಾಗುತ್ತಿದೆ.

ಕಾನೂನು ಬಾಹಿರವಾಗಿ ಅಕ್ರಮ ನಾಡಬಂದೂಕು ತಯಾರಿ ಮತ್ತು ಮಾರಾಟ ಜಾಲ ಪತ್ತೆಯಾಗುವ ಸಾಧ್ಯತೆ ಇದೆ. ಈ ಜಾಲದ ಹಿಂದೆ ಕ್ಷೇತ್ರದ ಪ್ರಭಾವಿ ಮುಖಂಡರು ಭಾಗಿಯಾಗಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಿದೆ. ಗೃಹಸಚಿವರ ಆಪ್ತರು ಆರೋಪಿಗಳನ್ನು ಬಿಡಿಸಲು ಹರಸಾಹಸ ಪಡುತ್ತಿರುವ ಆರೋಪ ಕೇಳಿ ಬಂದಿದೆ. ಪೊಲೀಸರು ಒತ್ತಡಕ್ಕೆ ಮಣಿದು ಆರೋಪಿಗಳನ್ನು ರಕ್ಷಿಸುವ ಅನುಮಾನ ಮನೆ ಮಾಡಿದೆ.
ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post