ತ್ರಿಯಂಬಕಪುರ ಗ್ರಾ.ಪಂ.ಗೆ ಅನಿಲ್ ಸಾರಥ್ಯ

ತ್ರಿಯಂಬಕಪುರ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಅನಿಲ್ ವಿಧಾತ
ಬೆಂಬಲಕ್ಕೆ ನಿಂತ ಬಿಜೆಪಿ, ಆರಗ ಜ್ಞಾನೇಂದ್ರ

ತ್ರಿಯಂಬಕಪುರ ಗ್ರಾ.ಪಂ.ಗೆ ಅನಿಲ್ ಸಾರಥ್ಯ
ತೀರ್ಥಹಳ್ಳಿ ತಾಲೂಕಿನ ಇತಿಹಾಸದಲ್ಲಿಯೇ  ಪ್ರಪ್ರಥಮ ಬಾರಿಗೆ ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನವನ್ನು ಪರ್ತಕರ್ತರೊಬ್ಬರು ಅಲಂಕರಿಸಿದ್ದಾರೆ.
ಗ್ರಾಮ ಪಂಚಾಯತಿ ಚುನಾವಣೆ ನಡೆದ ಸಂದರ್ಭದಲ್ಲಿ ಮೂರ್ನಾಲ್ಕು ಮಂದಿ ಪತ್ರಕರ್ತರು ಆಯ್ಕೆಯಾಗಿದ್ದರು. ಅವರುಗಳಲ್ಲಿ ಸುಧೀರ್ಘ 20 ವರ್ಷಗಳ ಕಾಲದಿಂದಲೂ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಧಾತ ಅನಿಲ್ ಬಿಜೆಪಿ ಪಕ್ಷದ ಬೆಂಬಲದಿಂದ ತ್ರಿಯಂಬಕಪುರ ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನ ಅಲಂಕರಿಸಿದ್ದಾರೆ.
ಕಳೆದ ಚುನಾವಣೆಯಲ್ಲಿ ತ್ರಿಯಂಬಕಪುರ ಗ್ರಾಮಪಂಚಾಯತಿಯ ವಿರೂಪಾಪುರ ಗ್ರಾಮದ ಜನತೆ ಪಂಚಾಯತಿಯಲ್ಲಿಯೇ ಅತ್ಯಧಿಕ ಬಹುಮತದಿಂದ  ಪರ್ತಕರ್ತರೋರ್ವರನ್ನು ಸದಸ್ಯರಾಗಿ ಆಯ್ಕೆಯಾಗುವಂತೆ ಮಾಡಿದ್ದರು.
ಆ ಸಂದರ್ಭದಲ್ಲೇ ಅಧ್ಯಕ್ಷರಾಗುತ್ತಾರೆಂಬ ಮಾತುಗಳು ಕೇಳಿ ಬಂದಿತ್ತಾದರೂ ಬದಲಾದ ರಾಜಕೀಯ ವಿದ್ಯಮಾನದಲ್ಲಿ ಅಧ್ಯಕ್ಷ ಸ್ಥಾನ ದೂರ ಉಳಿದ್ದಿದ್ದರೂ ಬಿಜೆಪಿಯ ಸಂಘಟನೆ, ಕ್ಷೇತ್ರದ ಶಾಸಕ ಹಾಗೂ ರಾಜ್ಯದ ಗೃಹಮಂತ್ರಿ ಆರಗ ಜ್ಞಾನೇಂದ್ರ ಸದಸ್ಯರುಗಳಲ್ಲಾದ ಒಡಂಬಡಿಕೆಯಂತೆ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುವ ಅವಕಾಶವನ್ನು ಅನಿಲ್ ವಿಧಾತ ಅವರಿಗೆ ನೀಡಿದ್ದಾರೆ.
ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post