ನೇಣು ಬಿಗಿದುಕೊಂಡು ಹೆಗ್ಗನಹಳ್ಳಿ ಬಿಜೆಪಿ ಮುಖಂಡ ಆತ್ಮಹತ್ಯೆ

ಹೆಗ್ಗನಹಳ್ಳಿ ವಾರ್ಡ್ ಬಿಜೆಪಿ ಮುಖಂಡ ಅನಂತರಾಜ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಬೆಂಗಳೂರು ಹೆಗ್ಗನಹಳ್ಳಿ ವಾರ್ಡ್ ಬಿಜೆಪಿ ಮುಖಂಡ ಅನಂತರಾಜ್ (46) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಹಲವು ವರ್ಷಗಳಿಂದ ಥೈರಾಯಿಡ್ ಖಾಯಿಲೆಯಿಂದ ಬಳಲುತ್ತಿದ್ದ ಇವರು ಹಲವು ಬಾರಿ ಚಿಕಿತ್ಸೆ ಪಡೆದರೂ ಗುಣಮುಖರಾಗಿರಲಿಲ್ಲ.

ಕಳೆದ ರಾತ್ರಿ 7.30ರ ವೇಳೆಗೆ ಮನೆಯಲ್ಲಿ ಫ್ಯಾನಿಗೆ‌‌ ನೇಣು ಬಿಗಿದು ಸಾವಿಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಮನೆಯವರು ನೀಡಿದ ಮಾಹಿತಿ‌‌ ಮೇರೆಗೆ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದರು.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post