ತೂದೂರು ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಸನ್ಮಾನ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸಾಧಿಸಿದವರಿಗೆ ಗೌರವ

ವಿದ್ಯಾರ್ಥಿಗಳಿಗೆ ಗಣ್ಯರಿಂದ ಶ್ಲಾಘನೆ

ತೂದೂರು ಸರ್ಕಾರಿ ಪ್ರೌಢಶಾಲೆಯ 2021-22ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಗುರುತಿಸಿ ಶಾಲಾಭಿವೃದ್ದಿ ಸಮಿತಿ, ಗ್ರಾಮ ಪಂಚಾಯಿತಿ ವತಿಯಿಂದ ಸನ್ಮಾನಿಸಿದರು.

ತೂದೂರು ಗ್ರಾ.ಪಂ. ಅಧ್ಯಕ್ಷ ಮಧುರಾಜ್‌ ಹೆಗ್ಡೆ ಮಾತನಾಡಿ, ಕೋವಿಡ್‌ ಸಂದರ್ಭದಲ್ಲೂ ಶೇಕಡಾ 100ರ ಫಲಿತಾಂಶ ನೀಡಿದ ವಿದ್ಯಾರ್ಥಿಗಳ ಶ್ರಮಕ್ಕೆ ಶ್ಲಾಘಿಸಿದರು. ಗ್ರಾಮೀಣ ಮಕ್ಕಳ ಶಿಕ್ಷಣಕ್ಕೆ ಪೂರಕವಾದ ವಾತಾವರಣ ಶಾಲೆ ಕಲ್ಪಿಸುತ್ತಿದೆ. ಪಂಚಾಯಿತಿ, ಎಸ್ಡಿಎಂಸಿ ಉತ್ತಮ ಸಹಕಾರ ನೀಡುತ್ತಿದೆ ಎಂದರು. ಕಾರ್ಯಕ್ರಮದಲ್ಲಿ ಶಾಲೆಗೆ ಮೊದಲು ಬಂದ ವಿದ್ಯಾರ್ಥಿನಿ ಹೇಮಲತಾಳಿಗೆ 2 ಸಾವಿರ ನಗದು ವಿತರಿಸಿದರು.

ದಾನಿ ಶಶಿಮೋಹನ್ ಮಾತನಾಡಿ, ಪ್ರತಿವರ್ಷ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳಿಗೆ ತಂದೆಯ ಸ್ಮರಣಾರ್ಥ ಬಹುಮಾನ ನೀಡುವುದಾಗಿ ಘೋಷಿಸಿದರು.

ಈ ಸಂದರ್ಭದಲ್ಲಿಸ್‌ ಡಿಎಂಸಿ ಅಧ್ಯಕ್ಷ ಕವಿರಾಜ್, ಮುಖ್ಯ ಶಿಕ್ಷಕ ಜಯಪ್ಪ ಮಾತನಾಡಿದರು. ವಿದ್ಯಾರ್ಥಿನಿ ಅಕ್ಷತಾ ಸ್ವಾಗತಿಸಿ, ಖುಷಿ ವಂದಿಸಿ, ಪ್ರೀತಿ ನಿರೂಪಿಸಿದಳು.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post