ನೂತನ ಪ್ರಿನ್ಸಿಪಾಲರಾಗಿ ಪ್ರೊ. ನಟರಾಜ್

ಪ್ರೊ.ಮಲ್ಲೇಶನಾಯ್ಕ್ ಬೀಳ್ಕೊಡುಗೆ!
ತುಂಗಾ ಮಹಾವಿದ್ಯಾಲಯದ ಪ್ರಾಧ್ಯಾಪಾಕರಾಗಿ 34 ವರ್ಷ ಸೇವೆ


ತುಂಗಾ ಕಾಲೇಜಿನ ಹಳೆಯ ವಿದಾರ್ಥಿಗಳಿಂದ ಪ್ರೊ. ಮಲ್ಲೇಶನಾಯ್ಕ್ ಅವರಿಗೆ ಸನ್ಮಾನಿಸಿ ಗೌರವಿಸಿದರು.
ತೀರ್ಥಹಳ್ಳಿಯ ಪ್ರತಿಷ್ಠಿತ ತುಂಗಾ ಮಹಾವಿದ್ಯಾಲಯದ ಪ್ರಾಂಶುಪಾಲರಾಗಿ, ಪ್ರಾಧ್ಯಾಪಕರಾಗಿ 34 ವರ್ಷಗಳ ಸೇವೆ ಸಲ್ಲಿಸಿದ್ದ ಪ್ರೊ. ಮಲ್ಲೇಶ್ ನಾಯಕ್ ನಿವೃತ್ತರಾಗಿದ್ದಾರೆ. ಅವರಿಗೆ ಕಾಲೇಜಿನ ವಿದ್ಯಾರ್ಥಿಗಳು, ಆಡಳಿತ ಮಂಡಳಿ, ಹಳೆಯ ವಿದ್ಯಾರ್ಥಿಗಳು, ಅಧ್ಯಾಪಕರ ಸಂಘದ ವತಿಯಿಂದ ಗೌರವಿಸಿ ಬೀಳ್ಕೊಡಲಾಯಿತು.

ಈ ಸಂದರ್ಭದಲ್ಲಿ ತುಂಗಾ ವಿದ್ಯಾವರ್ಧಕ ಸಂಘದ ಕೌಲಾನಿ ಧರ್ಮಯ್ಯ ಮಾತನಾಡಿ, ಕಾಲೇಜಿನ ಅಭಿವೃದ್ಧಿಗೆ ಮಲ್ಲೇಶ್ ನಾಯಕ್ ಅವರ ಕೊಡುಗೆ ಅಪಾರ ಎಂದರು.

ಕಾಲೇಜಿನ ಆಡಳಿತ ಮಂಡಳಿಯ ರಮೇಶ್, ಜಿ.ಟಿ. ಸುಂದರೇಶ್ ಮಾತನಾಡಿ, ಪ್ರೀತಿ, ವಿಶ್ವಾಸದ ಮಾತುಗಳು, ಸೌಮ್ಯ ಸ್ವಭಾವದ ಬಗ್ಗೆ ಪ್ರಶಂಸಿದರು. 1988ರಿಂದ 34 ವರ್ಷಗಳಿಂದ ತಮ್ಮ ಸೇವೆ ಮಾಡಿದ್ದಾರೆ. ಕುವೆಂಪು ವಿಶ್ವವಿದ್ಯಾನಿಲಯ ಮಟ್ಟದಲ್ಲಿ ಉತ್ತಮ ಹೆಸರು ಹೊಂದಿದ್ದರು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು, ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿಗಳು ಹಾಜರಿದ್ದರು.

ನೂತನ ಪ್ರಾಂಶುಪಾಲರಾಗಿ ಪ್ರೊ. ನಟರಾಜ್‌ ಅಧಿಕಾರ ಸ್ವೀಕಾರ

ಪ್ರೊ. ನಟರಾಜ್
ಖ್ಯಾತ ವ್ಯಂಗ್ಯ ಚಿತ್ರ ಕಲಾವಿದ, ಸಾಹಿತ್ಯ ಪ್ರೇಮಿ, ಇಂಗ್ಲೀಷ್‌ ಪ್ರಾಧ್ಯಾಪಕ ಪ್ರೊ. ನಟರಾಜ್‌ ನೂತನ ಪ್ರಾಂಶುಪಾಲರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿ ನಟರಾಜ್‌ ಅವರನ್ನು ಪ್ರಾಂಶುಪಾಲರನ್ನಾಗಿ ಆಯ್ಕೆ ಮಾಡಿದೆ.

 

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post