ದ್ವಿತೀಯ ದರ್ಜೆ ನೌಕರರಾಗಿ ಸೇವೆ
ತೀರ್ಥಹಳ್ಳಿ ಪಟ್ಟಣ ಪಂಚಾಯಿತಿಯಲ್ಲಿ ಸುದೀರ್ಘ 29 ವರ್ಷಗಳ ಕಾಲ ದ್ವಿತೀಯ ದರ್ಜೆ ನೌಕರರಾಗಿ ಸೇವೆ ಸಲ್ಲಿಸಿದ್ದ ಬಾಲಕೃಷ್ಣ (ಬಾಲಣ್ಣ)
ನಿವೃತ್ತರಾದರು. ಅವರಿಗೆ ತೀರ್ಥಹಳ್ಳಿ ಪಟ್ಟಣ ಪಂಚಾತಿಯಿಂದ ಆತ್ಮೀಯವಾಗಿ ಬೀಳ್ಕೊಡುಗೆ ನೀಡಿದರು.
ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಶಬನಮ್, ಉಪಾಧ್ಯಕ್ಷ
ಜಯಪ್ರಕಾಶ್ ಶೆಟ್ಟಿ, ಮುಖ್ಯಾಧಿಕಾರಿ ಕುರಿಯಾ ಕೋಸ್ ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.
