ಹಿಂದುಳಿದ ವರ್ಗಕ್ಕೆ ಸಂವಿಧಾನಿಕ ಮಾನ್ಯತೆ

ಕಾಂಗ್ರೆಸ್ ಓಬಿಸಿಯನ್ನು ಮತಬ್ಯಾಂಕ್ ಮಾಡಿಕೊಂಡಿತ್ತು
ಶೋಷಿತ ಸಮೂದಾಯದ ಜಾಗ್ರತೆಗೆ ಪಣತೊಟ್ಟ ಮೋದಿ
ಹಿಂದುಳಿತ ವರ್ಗಕ್ಕೆ ಸಾಮಾಜಿಕ, ಆರ್ಥಿಕ, ರಾಜಕೀಯ, ಶೈಕ್ಷಣಿಕ ಸ್ಥಾನಮಾನ ನೀಡುವುದರಲ್ಲಿ 68 ವರ್ಷಗಳ ಕಾಂಗ್ರೆಸ್‌ ಪಕ್ಷ ಸೋತಿದೆ. ಕೇಂದ್ರ ಸರ್ಕಾರ ಶೇಕಡಾ 27 ರಷ್ಟು ಮೀಸಲಾತಿಯನ್ನು ನೀಡುವ ಮೂಲಕ ಸಂವಿಧಾನಿಕ ಮಾನ್ಯತೆ ಒದಗಿಸಿದೆ ಎಂದು ರಾಜ್ಯ ಓಬಿಸಿ ಮೋರ್ಚಾ ಉಪಾಧ್ಯಕ್ಷ ಅಶೋಕಮೂರ್ತಿ ಹೇಳಿದರು.
ತೀರ್ಥಹಳ್ಳಿ ಪಟ್ಟಣದ ಶಾಂತವೇರಿ ಗೋಪಾಲಗೌಡ ರಂಗಮಂದಿರದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಅವರು ಮಾತನಾಡಿದರು.
ಓಬಿಸಿ ವರ್ಗಗಳು ಕೇವಲ ಮತಬ್ಯಾಂಕ್‌ ಆಗಿ ನಿರ್ಮಾಣಗೊಂಡಿತ್ತು. ಬಲಿಷ್ಠ ಸಮೂದಾಯಗಳ ನಡುವೆ ಹಿಂದುಳಿದ ವರ್ಗಕ್ಕೆ ಹೆಚ್ಚಿನ ಪ್ರಾತಿನಿಧ್ಯ ನೀಡಲು ಸಾಧ್ಯವಾಗುತ್ತಿರಲಿಲ್ಲ. ಶೋಷಿತ ಸಮೂದಾಯದ ಜಾಗ್ರತೆಯಂತಹ ಕಾರ್ಯಕ್ರಮ ನಿರ್ಮಾಣವಾಗಿದ್ದು, ವಿಶೇಷ ಅನುದಾನ ಕಲ್ಪಿಸಲಾಗಿದೆ ಎಂದು ತಿಳಿಸಿದರು.
ಕೇಂದ್ರ, ರಾಜ್ಯ ಸರ್ಕಾರ ತುಳಿತಕ್ಕೆ ಒಳಗಾಗಿರುವ ಸಮೂದಾಯಗಳನ್ನು ಮುಖ್ಯ ವಾಹಿನಿಗೆ ತರುವ ನಿಟ್ಟಿನಲ್ಲಿ ಕಾರ್ಯಕ್ರಮ ರೂಪಿಸಿದೆ. ಸಮೂದಾಯಕ್ಕೆ ಆದ್ಯತೆ ನೀಡುವುದರಿಂದ ಜಾತಿಯಾಧಾರಿತ ಗೋಡೆ ನಿರ್ಮಾಣವಾಗುವುದಿಲ್ಲವೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ಹಿಂದುಳಿದ ವರ್ಗಗಳು ಶೋಷಣೆಗೆ ಒಳಗಾಗಿದ್ದಾರೆ. ಸಾಮೂದಾಯಿಕ ಸ್ಥಾನಮಾನಕ್ಕೆ ಹೋರಾಟ ಮಾಡುವುದು ಕಷ್ಟ. ಆ ಹಿನ್ನಲೆಯಲ್ಲಿ ಅವಶ್ಯಕವಾಗಿದೆ ಎಂದರು.
ಒಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ಸಿ.ಎನ್. ಮಾಲ್ತೇಶ್‌ ಮಾತನಾಡಿ, ಜಿಲ್ಲಾ, ಗ್ರಾಮ, ಪಟ್ಟಣದ ಸದಸ್ಯರನ್ನು ಒಳಗೊಂಡ ಸಮಿತಿ ಮೂಲಕ ಹಿಂದುಳಿದ ವರ್ಗಗಳ ಸ್ಥಿತಿಗತಿ ಅಧ್ಯಯನಕ್ಕೆ ಸಿದ್ದತೆ ನಡೆದಿದೆ. ತೀರ್ಥಹಳ್ಳಿಯಲ್ಲಿ ಜೂನ್‌ 25ರಂದು ಬೃಹತ್‌ ಸಮಾವೇಶ ಹಮ್ಮಿಕೊಂಡಿದ್ದೇವೆ ಎಂದರು.
ಪತ್ರಿಕಾಗೋಷ್ಟಿಯಲ್ಲಿ ಮಂಡಲ ಬಿಜೆಪಿ ಅಧ್ಯಕ್ಷ ಬಾಳೇಬೈಲು ರಾಘವೇಂದ್ರ, ಪ್ರಧಾನ ಕಾರ್ಯದರ್ಶಿ ಬೇಗುವಳ್ಳಿ ಕವಿರಾಜ್‌, ಹೆದ್ದೂರು ನವೀನ್‌, ಜಿಲ್ಲಾ ಓಬಿಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಲೋಕೇಶ್‌, ಪ್ರಭಾರಿ ರಾಜೇಶ ಶೆಟ್ಟಿ, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಸಾಲೇಕೊಪ್ಪ ರಾಮಚಂದ್ರ, ತಾಲ್ಲೂಕು ಓಬಿಸಿ ಮೋರ್ಚಾ ಅಧ್ಯಕ್ಷ ಹೊನ್ನಾಸ್‌ಗದ್ದೆ ಮಂಜುನಾಥ್‌ ಇದ್ದರು.
ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post