ಅರ್ಥಶಾಸ್ತ್ರದಲ್ಲಿ ಸಿಂಚನ ನಾಲ್ಕನೇ ರ್ಯಾಂಕ್


ಕುವೆಂಪು ವಿಶ್ವವಿದ್ಯಾಲಯದ ದೂರಶಿಕ್ಷಣ ಕೇಂದ್ರವು ನಡೆಸಿದ ಅರ್ಥಶಾಸ್ತ್ರ ವಿಷಯದ ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಸಿಂಚನ ಎಸ್. 4ನೇ ರ್ಯಾಂಕ್ ಪಡೆದಿದ್ದಾರೆ.  ಸಿಂಚನ ಹೊಸನಗರ ತಾಲ್ಲೂಕು ಆನೆಗದ್ದೆ ಗ್ರಾಮದ ಯಕ್ಷಗಾನ ಕಲಾವಿದ ಸತೀಶ್ ಹೆಗಡೆ, ಸಂಧ್ಯಾ ಹೆಗಡೆ ದಂಪತಿ ಪುತ್ರಿ. ಸಾಧನೆಯ ಮೂಲಕ ಕೀರ್ತಿ ತಂದ ಸಿಂಚನ ಅವರಿಗೆ ಆನೆಗದ್ದೆ ಗ್ರಾಮಸ್ಥರು ಅಭಿನಂದಿಸಿದ್ದಾರೆ. ಸಿಂಚನ ಮೂಲತಃ ಹರಳೀಮಠದ ಹೆಸರಾಂತ ಲೇಖಕ, ಸಾಹಿತಿ ಸರ್ಜಾ ಶಂಕರ್‌ ಹರಳೀಮಠ ಅವರ ಸಹೋದರಿ ಮಗಳು.
ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post