ಭಾನುವಾರ ಯಕ್ಷಭೂಮಿ ಉದ್ಘಾಟನೆ

ಯಕ್ಷಭೂಮಿ ಯಕ್ಷಗಾನ ಅಧ್ಯಯನ ಕೇಂದ್ರ ಆರಂಭಕ್ಕೆ ಕ್ಷಣಗಣನೆ
ಯಕ್ಷಗುರು ಶೈಲೇಶ್‌ ಸಾರಥ್ಯದ ಯಕ್ಷಭೂಮಿ ಕೇಂದ್ರ

ಉಡುಪಿ ಯಕ್ಷಗಾನ ಕೇಂದ್ರದಲ್ಲಿ ಶೈಲೇಶ್‌ ಅವರಿಂದ ತರಬೇತಿ
ಉಡುಪಿ ಯಕ್ಷಗಾನ ಕೇಂದ್ರದಲ್ಲಿ ಒಂದು ದಶಕಗಳ ಕಾಲ ಗುರುಗಳಾಗಿ ಅನುಭವ ಹೊಂದಿರುವ ತಾಲ್ಲೂಕಿನ ದೇವಂಗಿ ಜಡ್ಡುಗದ್ದೆ ‌ಯಕ್ಷಗುರು ಶೈಲೇಶ್ ಅವರ ಯಕ್ಷಭೂಮಿ ಯಕ್ಷಗಾನ ಅಧ್ಯಯನ ಕೇಂದ್ರ ಜೂನ್‌ 5ಭಾನುವಾರ ಬೆಳಿಗ್ಗೆ 10.30ಕ್ಕೆ ರಾಮೇಶ್ವರ ದೇವಸ್ಥಾನದ ಸಭಾಭವನದಲ್ಲಿ ಉದ್ಘಾಟನೆಗೊಳ್ಳಲಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.


ಮಲೆನಾಡಿನಲ್ಲಿ ಅನೇಕರು ಯಕ್ಷಗಾನ ಆಸಕ್ತರಿದ್ದಾರೆ. ವಯಸ್ಸಿಗೆ ಮಿತಿ ಇಲ್ಲದೆ ತರಬೇತಿ ಪಡೆಯಬಹುದು. ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ವಿಶೇಷ ತರಗತಿ ನೀಡಲಾಗುತ್ತದೆ. ಅಲ್ಲದೆ ಶಿಕ್ಷಕರು, ಉಪನ್ಯಾಸಕರು, ರಂಗಭೂಮಿ, ಸಾಹಿತ್ಯಾಸಕ್ತರು ಪಾಲ್ಗೊಳ್ಳಬಹುದು. ಯಕ್ಷಭೂಮಿಯ ಉದ್ಘಾಟನೆಯನ್ನು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಂಗಳಗಾರ್‌ ರಮೇಶ್‌ ಆಚಾರ್ಯ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ರಂಗಾಯಣ ನಿರ್ದೇಶಕ ಸಂದೇಶ ಜವಳಿ, ರಂಗಶಿಕ್ಷಕ ಶ್ರೀಕಾಂತ್‌ ಕುಮುಟ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿದಿದ್ದಾರೆ.
ಆನ್ಲೈನ್ನಲ್ಲಿ ಅರ್ಜಿ ಕಳುಹಿಸಲು Q R ಕೋಡ್ ಅಥವಾ ಲಿಂಕ್ ( https://forms.gle/EodEufT4mMojrTbH9 ) ಬಳಸಿ. 


ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post