ವಿ.ಕೆ. ಫ್ಯೂಯಲ್ಸ್‌ನಲ್ಲಿ ಕೃಷಿ ಉತ್ಸವ

ಬಿಪಿಸಿಎಲ್‌ನಿಂದ ಗ್ರಾಹಕ ಸ್ನೇಹಿ ಕಾರ್ಯಕ್ರಮ
ಕೃಷಿ ಉಪಕರಣ ಬಳಕೆ ಸಂಪೂರ್ಣ ಮಾಹಿತಿ

ತೀರ್ಥಹಳ್ಳಿ ಪಟ್ಟಣದ ಬಾಳೇಬೈಲಿನಲ್ಲಿರುವ ಭಾರತ್‌ ಪೆಟ್ರೋಲಿಯಂ ಕಾರ್ಪೋರೇಷನ್‌ ಸಂಸ್ಥೆಯ ವಿಕೆ ಫ್ಯೂಯಲ್ಸ್‌ ಪೆಟ್ರೋಲ್‌ ಬಂಕ್‌ನಲ್ಲಿ ಸೋಮವಾರ ಕೃಷಿ ಉಪಕರಣಗಳ ಮಾಹಿತಿ, ಟ್ರಾಕ್ಟರ್‌ ಇಂಜಿನ್‌ ಆಯಿಲ್‌ ಬಿಡುಗಡೆ, ಪಿನೋ ಬ್ಯಾಂಕಿಂಗ್‌ ಸೌಲಭ್ಯಗಳ ಮಾಹಿತಿ, ಕೃಷಿಗೆ ಸಂಬಂಧಿಸಿದ ವಿವಿಧ ಮಾಹಿತಿ ಮಳಿಗೆ ಒಳಗೊಂಡ ಕೃಷಿ ಉತ್ಸವ ಜರುಗಿತು.

ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಶಬನಮ್‌ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕೃಷಿಗೆ ಸಂಬಂಧಿಸಿದ ಸೌಲಭ್ಯಗಳ ಮಾಹಿತಿ ಮಲೆನಾಡು ಪ್ರದೇಶಕ್ಕೆ ಅಗತ್ಯವಾಗಿದೆ. ಕೃಷಿಕರು ಇದರ ಉಪಯೋಗ ಪಡೆದುಕೊಳ್ಳಬೇಕು. ಗ್ರಾಹಕ ಸ್ನೇಹಿಯಾಗಿ ಕೆಲಸ ಮಾಡುತ್ತಿರುವ ಬಿಪಿಸಿಎಲ್‌ ಕಂಪನಿ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದರು.

ಕೃಷಿ ಅಧಿಕಾರಿ ಕೌಶಿಕ್ ರೈತರಿಗೆ ಕೃಷಿ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯತಿ ಉಪಾಧ್ಯಕ್ಷ ಜಯಪ್ರಕಾಶ್ ಶೆಟ್ಟಿ, ಪ.ಪಂ.ಸದಸ್ಯೆ ಗೀತಾ ರಮೇಶ್, ಬಿಪಿಸಿಎಲ್ ಕಂಪನಿಯ ಸಂದೀಪ್ ಹಾಗೂ ನಾಗರಾಜ್ ಅವರು ಉಪಸ್ಥಿತರಿದ್ದು ಮಾತನಾಡಿದರು. ವಿ.ಕೆ.ಫ್ಯೂಯಲ್ಸ್‌ನ ಡೀಲರ್ ಸುಚಿತ್ರಾ ರಮೇಶ್ ಶೆಟ್ಟಿ ಉಪಸ್ಥಿತರಿದ್ದರು. ಶಶಿಕುಮಾರ್ ಕಾರಂತ ಪ್ರಾರ್ಥಿಸಿದರು. ಟಿ.ಕೆ. ಮೇಶ್ ಶೆಟ್ಟಿ ಸ್ವಾಗತಿಸಿದರು. 

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post