ಮಂಡಗದ್ದೆಯಲ್ಲಿ ಬೀಜ ಬಿತ್ತನೆಗೆ ಅಭಿಯಾನ
ಮಂಡಗದ್ದೆ ವಲಯಾರಣ್ಯ ವ್ಯಾಪ್ತಿಯಲ್ಲಿ ವಿದ್ಯಾರ್ಥಿಗಳು, ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ವಿವಿಧ ಜಾತಿಯ ಸಾವಿರಾರು ಬಿತ್ತನೆ ಬೀಜಗಳನ್ನು ಅರಣ್ಯ ಇಲಾಖೆ ವತಿಯಿಂದ ಬಿತ್ತನೆ ಮಾಡಲಾಯಿತು.
ಕರ್ನಾಟಕ ಅರಣ್ಯ ಇಲಾಖೆ ಪರಿಸರ ದಿನಾಚರಣೆ ಅಂಗವಾಗಿ ಜೂನ್ 05 ರಿಂದ 12ರ ವರೆಗೆ ಅರಣ್ಯ ಭೂಮಿ ಮತ್ತು ವಿವಿಧ ಸ್ಥಳಗಳಲ್ಲಿ ಬೀಜ ಬಿತ್ತನೆ ಅಭಿಯಾನ ಹಮ್ಮಿಕೊಂಡಿದೆ. ಅದರ ಅಂಗವಾಗಿ ಭಾನುವಾರ ತೂದೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಮಧುರಾಜ್ ಹೆಗ್ಡೆ ಸಹಕಾರದೊಂದಿಗೆ ತೂದೂರಿನಲ್ಲಿ ಬೀಜ ಬಿತ್ತನೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

