ಸಹ್ಯಾದ್ರಿ ಮಕ್ಕಳಿಂದ ಗಿಡನೆಡುವ ಕಾರ್ಯಕ್ರಮ

"ನನ್ನ ನಾಡಿಗೆ ನನ್ನದೊಂದು ಗಿಡ"
ಅರಣ್ಯ ಇಲಾಖೆ ಅಭಿಯಾನಕ್ಕೆ ಮಕ್ಕಳ ಬಲ
ಲಕ್ಕುಂದಲ್ಲಿ ವಿದ್ಯಾರ್ಥಿಗಳಿಂದ ವನಮಹೋತ್ಸವ

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಹ್ಯಾದ್ರಿ ಸಂಯುಕ್ತ ಪದವಿ ಪೂರ್ವ ಕಾಲೇಜು ಹಾಗೂ ಮೇಗರವಳ್ಳಿ ವಲಯ ಅರಣ್ಯ ಇಲಾಖೆ ಆಶ್ರಯದಲ್ಲಿ "ನನ್ನ ನಾಡಿಗೆ ನನ್ನದೊಂದು ಗಿಡ" ಎಂಬ ಅಭಿಯಾನವನ್ನು ತೀರ್ಥಹಳ್ಳಿ ತಾಲ್ಲೂಕು ಆಗುಂಬೆ ಹೋಬಳಿಯ ಲಕ್ಕುಂದ ಸಮೀಪ ಅರಣ್ಯ ಇಲಾಖೆ ಸಹಭಾಗಿತ್ವದಲ್ಲಿ ವಿವಿಧ ತಳಿಯ ಬೀಜಗಳನ್ನು ಬಿತ್ತನೆ ಮಾಡುವ ಮೂಲಕ  ಅರಣೀಕರಣಕ್ಕೆ ಚಾಲನೆ ನೀಡಲಾಯಿತು.

ವಿದ್ಯಾರ್ಥಿಗಳು ಆಸಕ್ತಿಯಿಂದ ಬೀಜಬಿತ್ತನೆ ವನಮಹೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾದರು. ಅರಣ್ಯ ಇಲಾಖೆ ನರ್ಸರಿಯಲ್ಲಿರುವ ವಿವಿಧ ಸಸ್ಯಗಳನ್ನು ಇಲಾಖೆಯ ಸಿಬ್ಬಂದಿಗಳು ಮಕ್ಕಳಿಗೆ ಪರಿಚಯಿಸುವ ಮೂಲಕ ಪರಿಸರದ ಸಂರಕ್ಷಣೆಯ ಪಾಠ ಮಾಡಿದರು.

ಕಾರ್ಯಕ್ರಮದಲ್ಲಿ ತಾಲ್ಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಬಾಳೇಹಳ್ಳಿ ಪ್ರಭಾಕರ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ವಲಯ ಸಹಾಯಕ ಸಂರಕ್ಷಣಾಧಿಕಾರಿ ಪ್ರಕಾಶ್ ಎಚ್.ಎಸ್., ಮೇಗರವಳ್ಳಿ ವಲಯ ಅರಣ್ಯಾಧಿಕಾರಿ ಮಧುಕರ್, ಶಿಕ್ಷಣ ಸಂಸ್ಥೆಯ ನಿರ್ದೇಶಕರಾದ ಯು.ಡಿ. ವೆಂಕಟೇಶ್, ಕೂಳೂರು ಕೃಷ್ಣಮೂರ್ತಿ, ಸಹ್ಯಾದ್ರಿ ಸಂಯುಕ್ತ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಗುರುರಾಜ್ ಎಚ್.ಬಿ. ಮತ್ತು ಶಿಕ್ಷಕರು ಭಾಗವಹಿಸಿದ್ದರು.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post