ಬೆಟ್ಟಮಕ್ಕಿ ಶಾಲಾ ಮಕ್ಕಳಿಗೆ ಪುಸ್ತಕ ವಿತರಿಸಿದ ಕರವೇ

ಕರವೇ ವತಿಯಿಂದ ಮಕ್ಕಳಿಗೆ ಪುಸ್ತಕ, ಜಾಮಿಟ್ರಿ ಬಾಕ್ಸ್
ಟಿ.ಎ. ನಾರಾಯಣ ಗೌಡರ ಜನ್ಮದಿನ ಆಚರಣೆ
ತೀರ್ಥಹಳ್ಳಿ ತಾಲ್ಲೂಕು ಕರವೇ ವತಿಯಿಂದ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾದ್ಯಕ್ಷ ಟಿ.ಎ.ನಾರಾಯಣ ಗೌಡರ ಹುಟ್ಟುಹಬ್ಬವನ್ನು
ಬೆಟ್ಟಮಕ್ಕಿ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಗೆ ಪುಸ್ತಕ ಹಾಗೂ ಜಾಮೆಟ್ರಿ ಬಾಕ್ಸ್ ವಿತರಿಸುವ ಮೂಲಕ ಆಚರಿಸಲಾಯಿತು.
ಈ ಸಂದರ್ಭದಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ ಪಟೇಲ್ ವೆಂಕಟೇಶ್ ಹೆಗ್ಡೆ ಮಾತನಾಡಿ, ಇಪ್ಪತ್ತೈದು ವರ್ಷಗಳ ಹಿಂದೆ ಬೆಂಗಳೂರಿನಲ್ಲಿ ತಮಿಳು, ತೆಲುಗು ಭಾಷಿಗರಿಂದ ಕನ್ನಡಿಗರ ಮೇಲೆ ನಿರಂತರ ದಬ್ಬಾಳಿಕೆ ನಡೆಯುತ್ತಿದ್ದವು. ನಾರಾಯಣಗೌಡರು ಕರ್ನಾಟಕ ರಕ್ಷಣಾ ವೇದಿಕೆ ಸ್ಥಾಪಿಸಿದ ನಂತರ ಕರ್ನಾಟಕದಲ್ಲಿ ಕನ್ನಡಿಗರು ತಲೆ ಎತ್ತಿ ನಿಂತಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಸ್ಥಳೀಯರು ಪಟ್ಟಣ ಪಂಚಾಯತ್ ಸದಸ್ಯೆ ಸುಶೀಲಾ ಶೆಟ್ಟಿ,  ತಾಲ್ಲೂಕು ಕರವೇ ಉಪಾಧ್ಯಕ್ಷ ಸುರೇಶ್ ಟೈಲರ್, ಕಾರ್ಯದರ್ಶಿ ಮಲ್ಲಕ್ಕಿ ರಾಘವೇಂದ್ರ, ವಿಕ್ರಂ ಶೆಟ್ಟಿ ಬೆಟ್ಟಮಕ್ಕಿ, ನಗರ ಘಟಕ ಅಧ್ಯಕ್ಷ ರವಿ, ಯುವ ಘಟಕದ ಅಧ್ಯಕ್ಷ ಶ್ರೀಕಾಂತ್ ಬೆಟ್ಟಮಕ್ಕಿ, ಮಹಿಳಾ ಘಟಕದ ಅಧ್ಯಕ್ಷೆ ಜ್ಯೋತಿ ದಿಲೀಪ್, ಲಕ್ಷ್ಮಿದೇವಿ ಹಾಗೂ ಶಕುಂತಲಾ, ಯುವ ಘಟಕ ಪ್ರಧಾನ ಕಾರ್ಯದರ್ಶಿ ಮಹೇಶ್ ಬೆಟ್ಟಮಕ್ಕಿ, ಅರ್ಜುನ್ ಬಾಳೆಬೈಲು, ಸುನೀಲ್ ಗೌಡ ಬೆಟ್ಟಮಕ್ಕಿ, ಕಟ್ಟೆ ಕರಣ್, ನಿಶಾಲ್ ಡಿಸೋಜಾ ಚಿಟ್ಟೇಬೈಲು, ಅರುಣ್ ಬೋರ್ಡ್ಗಲ್ಲು ಇದ್ದರು.
ಶಾಲಾ ಮುಖ್ಯ ಶಿಕ್ಷಕಿ ಲತಾ ರಾಜ್ ಕುಮಾರ್ ಕೃತಜ್ಞತೆಯನ್ನು ಸಲ್ಲಿಸಿದ್ದಾರೆ ..
ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post