ಎಂಬಿಬಿಎಸ್‌ನಲ್ಲಿ ರಾಜ್ಯಕ್ಕೆ ಪ್ರಥಮ

ತೀರ್ಥಹಳ್ಳಿಯ ಡಾ. ತೇಜಸ್ವಿನಿ ಎಸ್.‌ಆರ್‌. ಸಾಧನೆ

ತೀರ್ಥಹಳ್ಳಿಯ ಪ್ರತಿಭಾನ್ವಿತ ವಿದ್ಯಾರ್ಥಿನಿ ಡಾ. ತೇಜಸ್ವಿನಿ ಎಸ್.ಆರ್.ಎಂಬಿಬಿಎಸ್‌ ಪದವಿಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆಯುವ ಮೂಲಕ ಹೆಮ್ಮೆ ಮೂಡಿಸಿದ್ದಾರೆ. ಮಾತ್ರವಲ್ಲದೆ ತೀರ್ಥಹಳ್ಳಿ ಹೆಸರು ರಾಜ್ಯ ಮಟ್ಟದಲ್ಲಿ ರಾರಾಜಿಸುವಂತೆ ಮಾಡಿದ್ದಾರೆ. ಪಿಯುಸಿ ಪರೀಕ್ಷೆಯಲ್ಲಿಯೂ ಪ್ರಥಮ ಸ್ಥಾನ ಪಡೆದುಕೊಂಡಿದ್ದ ತೇಜಸ್ವಿನಿ ಪ್ರಾಥಮಿಕ ಹಾಗೂ ಪಿಯು ಶಿಕ್ಷಣವನ್ನು ಸರ್ಕಾರಿ ಶಾಲೆಗಳಲ್ಲಿ ಪಡೆದವರು ಎಂಬುದು ವಿಶೇಷ. ವೈದ್ಯೆ ಆಗುವ ಅವರ ಕನಸು ಈಗ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆಯುವ ಮೂಲಕ ನನಸಾಗಿದೆ. ಅವರಿಗೆ ಧ್ವನಿ ಬಳಗದ ಅಭಿನಂದನೆಗಳು...

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post