ಕಿರು ಅರಣ್ಯ ಪ್ರದೇಶದಲ್ಲಿ ಬೀಜ ಬಿತ್ತನೆಗೆ ಚಾಲನೆ

ಸಾವಿರಾರು ಜಾತಿಯ ಬೀಜ ಬಿತ್ತನೆ 
ಜೂನ್‌ 05 ರಿಂದ 12ರ ವರೆಗೆ ಅಭಿಯಾನ


ತೀರ್ಥಹಳ್ಳಿ ವಲಯಾರಣ್ಯ ವ್ಯಾಪ್ತಿಯ ಭಾರತೀಪುರ ಕಿರು ಅರಣ್ಯ ಪ್ರದೇಶದಲ್ಲಿ ಮೊರಾರ್ಜಿ ದೇಸಾಯಿ ವಿದ್ಯಾರ್ಥಿಗಳು, ತೀರ್ಥಹಳ್ಳಿಯ ಸ್ಕೌಟ್‌ ಮತ್ತು ಗೈಡ್ಸ್‌ ವಿದ್ಯಾರ್ಥಿಗಳು, ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ವಿವಿಧ ಜಾತಿಯ ಸಾವಿರಾರು ಬಿತ್ತನೆ ಬೀಜಗಳನ್ನು ಅರಣ್ಯ ಇಲಾಖೆ ವತಿಯಿಂದ ಹಾಕಲಾಯಿತು.

ಕರ್ನಾಟಕ ಅರಣ್ಯ ಇಲಾಖೆ ಪರಿಸರ ದಿನಾಚರಣೆ ಅಂಗವಾಗಿ ಜೂನ್‌ 05 ರಿಂದ 12ರ ವರೆಗೆ ಅರಣ್ಯ ಭೂಮಿ ಮತ್ತು ವಿವಿಧ ಸ್ಥಳಗಳಲ್ಲಿ ಬೀಜ ಬಿತ್ತನೆ ಅಭಿಯಾನ ಹಮ್ಮಿಕೊಂಡಿದೆ. ಅದರ ಅಂಗವಾಗಿ ಭಾನುವಾರ ಭಾರತೀಪುರದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಸಿಬ್ಬಂದಿಗಳ ನೇತೃತ್ವದಲ್ಲಿ ಬೀಜ ಬಿತ್ತನೆ ಕಾರ್ಯಕ್ರಮ ಯಶಸ್ವಿಯಾಗಿ ನಡೆದಿದೆ.

ಈ ಸಂದರ್ಭದಲ್ಲಿ ತೀರ್ಥಹಳ್ಳಿಯ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಾಶ್ ಹೆಚ್.ಎಸ್.‌ ವಲ ಅರಣ್ಯಾಧಿಕಾರಿ ಅನಿಲ್ ಕುಮಾರ್ ಎಸ್., ಬಿ.ಜೆ.ಪಿ. ತಾಲ್ಲೂಕು ಅಧ್ಯಕ್ಷ ಬಾಳೇಬೈಲು ರಾಘವೇಂದ್ರ  ಬಿ.ಜೆ.ಪಿ. ಯುವ ಮೋರ್ಚಾ ಅಧ್ಯಕ್ಷ ಸಂತೋಷ ದೇವಾಡಿಗ, ಕುಡುಮಲ್ಲಿಗೆ ಗ್ರಾಮ ಪಂಚಾಯಿತಿ ಸದಸ್ಯ ಮಂಜುನಾಥ, ಶಿಕ್ಷಕ ವೃಂದದವರು ಹಾಗೂ ಅರಣ್ಯ ಸಿಬ್ಬಂದಿ ಸ್ಥಳೀಯರು ಭಾಗವಹಿಸಿದ್ದರು.

(ಕಾರ್ಯಕ್ರಮದ ವಿವರ:- ಹಸಿರು ಕರ್ನಾಟಕ ಇಲಾಖಾ ನೆಡುತೋಪು, ವಾಟಗಾರು, ದಿ: 08-06-2022, ಅಂದಗೆರೆ ಎಂ.ಎಫ್. ದಿ: 09-06-2022, ಬುಕ್ಲಾಪುರ ಗ್ರಾಮದ ಬ್ರಹ್ಮಗುಡ್ಡ ಪ್ರದೇಶ ದಿ: 10-06-2022).

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post