ಶಿಕ್ಷಣ ಸಚಿವ ನಾಗೇಶ್ ನಿವಾಸದ ಮೇಲೆ ದಾಳಿ
ಎನ್ಎಸ್ ಯುಐ ಕಾರ್ಯಕರ್ತರಿಂದ ಹಲ್ಲೆ ಆರೋಪ
ಶಿಕ್ಷಣ ಸಚಿವ ನಾಗೇಶ್ ಅವರ ನಿವಾಸದ ಮೇಲೆ ಎನ್ಎಸ್ ಯುಐ ಕಾರ್ಯಕರ್ತರು ಮುತ್ತಿಗೆ ಹಾಕಿ ದಾಳಿ ನಡೆಸಿರುವುದನ್ನು ಗೃಹಸಚಿವ ಆರಗ ಜ್ಞಾನೇಂದ್ರ ಖಂಡಿಸಿದ್ದಾರೆ.ರಾಜ್ಯ ಸರ್ಕಾರ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಮುಂದಾಗಿದೆ. 2ವಾಹನಗಳಲ್ಲಿ ಆಗಮಿಸಿದ ದುಷ್ಕರ್ಮಿಗಳು ತಿಪಟೂರಿನ ಸಚಿವರ ನಿವಾಸದ ಮೇಲೆ ಹಠಾತ್ ದಾಳಿ ನಡೆಸಿದ್ದಾರೆ.
ತಕ್ಷಣ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು ಎನ್ಎಸ್ ಯುಐ ಅಧ್ಯಕ್ಷರ ಮತ್ತು ಉಪಾಧ್ಯಕ್ಷರ ಒಳಗೊಂಡಂತೆ ಒಟ್ಟು ಹದಿನೈದು ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ. ಕಿಡಿಗೇಡಿಗಳು ಬೆಂಕಿ ಹಚ್ಚುವ ಕೆಲಸಕ್ಕೆ ಮುಂದಾಗಿದ್ದು ಘಟನೆಯಲ್ಲಿ ಓರ್ವ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ.
ನೆಲೆ ಕಳೆದುಕೊಂಡ ಕಾಂಗ್ರೆಸ್ ಪಕ್ಷ ಇಂಥ ನೀಚ ಕೃತ್ಯಕ್ಕೆ ಕುಮ್ಮಕ್ಕು ನೀಡಿದ್ದು ನಾಡಿನ ಜನತೆ ಇಂತಹ ಗೂಂಡಾ ರಾಜಕಾರಣ ಸಹಿಸುವುದಿಲ್ಲ ಎಂದು ಆರಗ ಜ್ಞಾನೇಂದ್ರ ಹೇಳಿದ್ದಾರೆ.