ಚಂದ್ರಶೇಖರ ಶೆಟ್ಟಿ ಇನ್ನಿಲ್ಲ

ಅವರಿನ್ನು ನೆನಪು ಮಾತ್ರ
ಬೆಜ್ಜವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಯದವಳ್ಳಿ ಗ್ರಾಮದ ಮೇಲಿನಕೊಪ್ಪ ಚಂದ್ರಶೇಖರ ಶೆಟ್ಟಿ(52) ಮಂಗಳವಾರ ಅಕಾಲಿಕವಾಗಿ ಮೃತಪಟ್ಟರು.
ತೀವ್ರ ಅನಾರೋಗ್ಯಕ್ಕೀಡಾಗಿದ್ದ ಅವರು ಶಿವಮೊಗ್ಗ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಜೆಸಿಬಿ, ಹಿಟಾಚಿ ಯಂತ್ರದ ವಹಿವಾಟು ಹೊಂದಿದ್ದ ಚಂದ್ರಶೇಖರ ಉತ್ತಮ ಸಂಪರ್ಕದ ಮೂಲಕ ಸಾರ್ವಜನಿಕರ ವಿಶ್ವಾಸ ಪಡೆದಿದ್ದರು.
ಮೂಲತಃ ಮಂಡಗದ್ದೆ ಗ್ರಾಮದ ಚಂದ್ರಶೇಖರ ಮೇಲಿನಕೊಪ್ಪದಲ್ಲಿ ನಿವಾಸ ನಿರ್ಮಿಸಿ ವಾಸವಾಗಿದ್ದರು. ಮೃತ ಚಂದ್ರಶೇಖರ ಮಂಡಗದ್ದೆ ಗ್ರಾಮ ಪಂಚಾಯಿತಿ ಸದಸ್ಯ ಬಿಜೆಪಿಯ ಪ್ರಭಾವಿ ಮುಖಂಡ ಸುನಿಲ್ ಶೆಟ್ಟಿ ಅವರ ಸಹೋದರ. ಮೃತರಿಗೆ ಪತ್ನಿ, ಓರ್ವ ಪುತ್ರ ಇದ್ದಾರೆ. ಚಂದ್ರಶೇಖರ ನಿಧನಕ್ಕೆ ಆನೇಕರು ತೀವ್ರ ಕಂಬನಿ ಮಿಡಿದಿದ್ದಾರೆ.
ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post