ಟಿಂಬರ್ ಲಾರಿ ಪಲ್ಟಿ

ಕರೆಕತ್ತಲು ಸೇತುವೆ ಬಳಿ ಅಪಘಾತ
ತಪ್ಪಿದ ಭಾರೀ ಅನಾಹುತ
ಯಡೂರು ಸಮೀಪದ ಸುಳುಗೋಡು ಗ್ರಾಮಪಂಚಾಯತ್ ವ್ಯಾಪ್ತಿಯ ಕರೆಕತ್ತಲು ಸೇತುವೆ ಬಳಿ ಮತ್ತೆ ಅಪಘಾತ ಸಂಭವಿಸಿದೆ.
ಬುಧವಾರ ಟಿಂಬರ್ ಲಾರಿಯೊಂದು ಕರೆಕತ್ತಲೆ ಸೇತುವೆ ಬಳಿ ಅಪಘಾತವಾಗಿ ಯಾವುದೇ ಪ್ರಾಣಾಪಾಯ ಆಗದೆ ಬಾರಿ ಅನಾಹುತ ತಪ್ಪಿದೆ.
ಕಳೆದ 15 ರಿಂದ 20 ದಿನಗಳಲ್ಲಿ ನಡೆದ ಮೂರನೇ ಅಪಘಾತ ಇದಾಗಿದೆ. ಕಡಿದಾದ ತಿರುವು ಹಾಗೂ ಯಾವುದೇ ಮುನ್ನೆಚ್ಚರಿಕಾ ಫಲಕ ಇಲ್ಲದೆ ಏಳೆಂಟು ವರ್ಷಗಳಿಂದ ಈ ಪ್ರದೇಶದಲ್ಲಿ 30 ರಿಂದ 40 ವಾಹನಗಳ ಅಪಘಾತವಾಗಿದೆ. ಒಂದು ತಿಂಗಳ ಹಿಂದೆ ಬಸ್ ಅಪಘಾತದಲ್ಲಿ ಒಬ್ಬ ವ್ಯಕ್ತಿ ಪ್ರಾಣ ಕಳೆದುಕೊಂಡಿದ್ದಾರೆ.
ಈ ಸ್ಥಳದಲ್ಲಿ ಹತ್ತು ಹಲವು ಸಾರಿ ಅಪಘಾತವಾಗುತ್ತಿದ್ದರು ಸಾರಿಗೆ, ಲೋಕೋಪಯೋಗಿ ಇಲಾಖೆ, ರಸ್ತೆ ಅಭಿವೃದ್ದಿ ನಿಗಮ, ಜನಪ್ರತಿನಿಧಿಗಳು ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಯಡೂರು ಗ್ರಾಮಸ್ಥರು ದೂರುತ್ತಾರೆ. ಸೂಚನಾ ಫಲಕ ಅಳವಡಿಸಿ ರಸ್ತೆಯ ತಿರುವುಗಳನ್ನು ಸರಿಪಡಿಸಿ ಅಪಘಾತ ತಡೆಯಲು ಸಹಕಾರಿಯಾಗಿ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post