ಕೊಪ್ಪ ವೃತ್ತದಲ್ಲಿ ಜೆಡಿಎಸ್ ಕಚೇರಿ ಉದ್ಘಾಟನೆ

ತೀರ್ಥಹಳ್ಳಿಯಲ್ಲಿ ಜೆಡಿಎಸ್‌ ಶಕೆ ಆರಂಭ

ಈಗಾಗಲೇ ಜೆಡಿಎಸ್‌ ಪಕ್ಷದ ವಿಧಾನಸಭಾ ಅಭ್ಯರ್ಥಿಯೆಂದು ಪಕ್ಷದಿಂದ ಘೋಷಿಸಲ್ಪಟ್ಟಿರುವ ಯಡೂರು ರಾಜಾರಾಂ ಮಾತನಾಡಿ ರಾಜಕೀಯವಾಗಿ ತೀರ್ಥಹಳ್ಳಿಯಲ್ಲಿ ಹೊಸಶಕೆ ಆರಂಭಿಸುವುದು ನಮ್ಮೆಲ್ಲರ ಗುರಿ ಹಿರಿಯರ ಮಾರ್ಗದರ್ಶನದಲ್ಲಿ ಯುವಕರ ಮನಗೆಲ್ಲುವುದು ನಮ್ಮ ಮುಂದಿನ ಸವಾಲು. ತೀರ್ಥಹಳ್ಳಿ ಕ್ಷೇತ್ರವನ್ನು ಪ್ರವಾಸೋಧ್ಯಮ ತಾಣವಾಗಿ ಮಾರ್ಪಡಿಸುವುದು ಹಾಗೂ ಇಡೀ ತಾಲ್ಲೂಕಿಗೆ ನೀರಾವರಿ ವ್ಯವಸ್ಥೆಯನ್ನು ಕಲ್ಪಿಸುವುದು ಮಾಜಿ ಸಿಎಂ ಕುಮಾರಸ್ವಾಮಿ ಅವರ ಕಲ್ಪನೆಯಾಗಿದೆ. ಅವರ ಮಾರ್ಗದರ್ಶನದಲ್ಲಿ ನಡೆಯಲಿದ್ದೇವೆ ಎಂದು ಹೇಳಿದರು. 

ತೀರ್ಥಹಳ್ಳಿಯಲ್ಲಿ ಜೆಡಿಎಸ್‌ ಪಕ್ಷಕ್ಕೆ ಭವ್ಯವಾದ ಪರಂಪರೆ ಇದೆ. ಪಕ್ಷವನ್ನು ಮುಂದಿನ ಚುನಾವಣೆಯಲ್ಲಿ ಅಧಿಕಾರಕ್ಕೆ ತರುವ ಮೂಲಕ ಮಾಜಿ ಪ್ರಧಾನಿ ದೇವೇಗೌಡರು ಮತ್ತು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರ ಕೈ ಬಲಪಡಿಸುವುದು ಪಕ್ಷದ ಗುರಿಯಾಗಿದೆ ಎಂದು ತೀರ್ಥಹಳ್ಳಿ ಕುವೆಂಪು ವೃತ್ತದಲ್ಲಿ ಜೆಡಿಎಸ್‌ ಕಚೇರಿ ಉದ್ಘಾಟಿಸಿ ಜಿಲ್ಲಾಧ್ಯಕ್ಷ ಎಂ.ಬಿ. ಶ್ರೀಕಾಂತ್ ಹೇಳಿದರು.

ಯಾರೇ ಪಕ್ಷ ತೊರೆದರೂ ಕೂಡ ಕಾರ್ಯಕರ್ತರು ವಿಚಲಿತವಾಗಿಲ್ಲ. ಅಪ್ಪಟ ಮಣ್ಣಿನ ಮಕ್ಕಳ ಪಕ್ಷವಾದ ಜೆಡಿಎಸ್‌ಗೆ ತೀರ್ಥಹಳ್ಳಿಯಲ್ಲಿ ಬೆಂಬಲ ಗುಪ್ತಗಾಮಿನಿಯಂತೆ ವ್ಯಕ್ತವಾಗುತ್ತಿದೆ ಎಂದರು.

ಮಾಜಿ ಶಾಸಕಿ ಶಾರದಾ ಪೂರ್ಯನಾಯ್ಕ್ ಮಾತನಾಡಿ, ಜೆಡಿಎಸ್ ಅಧಿಕಾರವಧಿಯಲ್ಲಿ ಗ್ರಾಮೀಣ ಪ್ರದೇಶಕ್ಕೆ ವಿಶೇಷ ಆದ್ಯತೆ ನೀಡಿದ್ದೇವೆ. ಕೋಟ್ಯಾಂತರ ರೂಪಾಯಿ ಅನುದಾನ ಒದಗಿಸಲಾಗಿದೆ. ಹೊನ್ನೇತಾಳು ಶಾಲಾ ವಿದ್ಯಾರ್ಥಿ ಅಶಿಕಾ ಸಾವಿನಿಂದ ಮನನೊಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕಾಲಸಂಕಗಳಿಗೆ ವಿಶೇಷ ಅನುದಾನ ಕಲ್ಪಿಸಿದ್ದರು ಎಂದು ತಿಳಿಸಿದರು.

ಜಿಲ್ಲಾ ಜೆಡಿಎಸ್ ಕಾರ್ಯದರ್ಶಿ ಕೆ.ಎನ್. ರಾಮಕೃಷ್ಣ, ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಕುಣಜೆ ಕಿರಣ್ ಪ್ರಭಾಕರ್, ಮುಖಂಡರಾದ ಹೆದ್ದೂರು ನಟರಾಜ್, ಯೋಗೀಶ್, ಆರ್.ಎ. ಬಾಬುಸಾಬ್, ಯುವ ಘಟಕದ ಅಧ್ಯಕ್ಷ ತಲಬಿ ರಾಘವೇಂದ್ರ ಇದ್ದರು.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post