ತೀರ್ಥಹಳ್ಳಿಯ ಯುವ ನಾಯಕರ ಬಂಧನ
ರಾಜಧಾನಿಯಲ್ಲಿ ಯೋಜನೆ ವಿರುದ್ಧ ಆಕ್ರೋಶ
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಸೇನಾ ನೇಮಕಾತಿ ಅಗ್ನಿಪಥ ಯೋಜನೆ ವಿರೋಧಿಸಿ ತೀರ್ಥಹಳ್ಳಿಯ ಯುವ ನಾಯಕರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಯುವ ಜನರಿಗೆ ಅನ್ಯಾಯವಾಗಿಲಿದೆ. ಕಾರ್ಯಾವಧಿ ಕಡಿಮೆ ಆಗಿರುವುದರಿಂದ ಭವಿಷ್ಯಕ್ಕೆ ತೊಂದರೆ ಆಗಲಿದೆ ಎಂದು ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನಾ ರ‍್ಯಾಲಿಯಲ್ಲಿ ಆಕ್ರೋಶ ಹೊರ ಹಾಕಿದರು.
ಪ್ರತಿಭಟನೆ ವೇಳೆ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ. ಈ ಸಂದರ್ಭದಲ್ಲಿ ತೀರ್ಥಹಳ್ಳಿಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ಅಮರನಾಥ್ ಶೆಟ್ಟಿ, ಪುಟ್ಟೊಡ್ಲು ರಾಘವೇಂದ್ರ, ರಾಷ್ಟ್ರೀಯ ವಕ್ತಾರ ಆದರ್ಶ ಹುಂಚದಕಟ್ಟೆ, ರಾಜ್ಯ ಯುವ ನಾಯಕ ನಿಕೇತ್ ರಾಜ್ ಮೌರ್ಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪೂರ್ಣೇಶ್ ಕೆಳಕೆರೆ, ಡಿಕೆಶಿ ಅಭಿಮಾನಿ ಬಳಗದ ತಾಲ್ಲೂಕು ಅಧ್ಯಕ್ಷ ಅಶ್ವಲ್ ಗೌಡ, ಶ್ರೇಯಸ್ ಮುಂತಾದವರನ್ನು ಬೆಂಗಳೂರಿನಲ್ಲಿ ಪೊಲೀಸರು ಪ್ರತಿಭಟನೆ ವೇಳೆ ಬಂದಿಸಿ ಕರೆದೊಯ್ದಿದ್ದಾರೆ. ಬಳಿಕ ಬಿಡುಗಡೆ ಮಾಡಿದ್ದಾರೆ.