ಮುಳುಬಾಗಿಲು ಗ್ರಾ.ಪಂ. ಅಭಿಯಾನ

ಬೀಜ ಬಿತ್ತನೆ ಕಾರ್ಯಕ್ರಮಕ್ಕೆ ಚಾಲು
ಅರಣ್ಯ ಇಲಾಖೆಯಿಂದ ಯಶಸ್ವಿ ಕಾರ್ಯಕ್ರಮ
ಮುಳುಬಾಗಿಲು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಆಗುಂಬೆ ವಲಯಾರಣ್ಯ ವಿಭಾಗ ಭಾನುವಾರ, ಸೋಮವಾರ ವಿವಿಧ ಗ್ರಾಮದಲ್ಲಿ ಬೀಜಬಿತ್ತನೆ ಅಭಿಯಾನ ಕಾರ್ಯಕ್ರಮ ನಡೆಸಿತು.
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಆರಂಭವಾಗಿರುವ ಬೀಜ ಬಿತ್ತನೆ ಕಾರ್ಯಕ್ರಮ ಪ್ರತಿ ಗ್ರಾಮದಲ್ಲೂ ಯಶಸ್ವಿ ಆಗಿಸಲು ಅರಣ್ಯ ಇಲಾಖೆ ಮಹತ್ವದ ಕಾರ್ಯಯೋಜನೆ ರೂಪಿಸಿದೆ. ಇದರಲ್ಲಿ ಸಾರ್ವಜನಿಕರು ಪಾಲ್ಗೊಳ್ಳುವಿಕೆ ಹೆಚ್ಚಿದೆ.
ಮುಳುಬಾಗಿಲು ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ಆರ್.‌ ಮೋಹನ್‌, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯೆ ಗೀತಾ ಶೆಟ್ಟಿ, ಆಗುಂಬೆ ವಲಯಾರಣ್ಯಧಿಕಾರಿ ಮಧುಕರ್‌, ಉಪ ವಲಯಾರಣ್ಯಧಿಕಾರಿಗಳಾದ ಸುನಿಲ್‌, ಕಿರಣ್‌ ಕುಮಾರ್‌, ಅನಿಲ್‌, ಗಣೇಶ್‌, ಬಿಳಾಲುಕೊಪ್ಪ ಶಾಲಾ ವಿದ್ಯಾರ್ಥಿಗಳು, ಮುಳುಬಾಗಿಲು ಗ್ರಾಮ ಪಂಚಾಯಿತಿ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post