ತೀ.ನಾ. ಶ್ರೀನಿವಾಸ್‌ ತೀವ್ರ ವಾಗ್ದಾಳಿ

ಸದ್ಯ ಆರಗ ಜ್ಞಾನೇಂದ್ರ ಜಿಲ್ಲೆಯ ಪ್ರಭಾವಿ ರಾಜಕಾರಣಿ
ಸುಳ್ಳುಗಳು ಬಿಟ್ಟರೆ ಏನೂ ಮಾಡುವುದಿಲ್ಲ…!

ತೀರ್ಥಹಳ್ಳಿ ಪಟ್ಟಣದ ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯಲ್ಲಿ ಮಲೆನಾಡು ರೈತ ಹೋರಾಟ ಸಮಿತಿ ಮುಖಂಡ ತೀ.ನಾ. ಶ್ರೀನಿವಾಸ್‌ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ ಗೃಹಸಚಿವರ ಮೇಲೆ ತೀವ್ರ ವಾಗ್ದಾಳಿ ನಡೆಸಿದರು.

ಜಿಲ್ಲೆಯ ಪ್ರಭಾವಿ ನಾಯಕರು ತಮ್ಮ ಮಕ್ಕಳ ಭವಿಷ್ಯ ರೂಪಿಸಲು ಮುಂದಾಗಿದ್ದಾರೆ. ಉಸ್ತುವಾರಿ ಸಚಿವರು ಕಾಣಿಸಿಕೊಳ್ಳುವುದಿಲ್ಲ. ಸದ್ಯ ಜಿಲ್ಲೆಯಲ್ಲಿ ಪ್ರಭಾವಿ ರಾಜಕಾರಣಿಯಾಗಿರುವ ಗೃಹಸಚಿವ ಆರಗ ಜ್ಞಾನೇಂದ್ರ ಮೊಬೈಲ್‌ನಲ್ಲಿ ಸುಳ್ಳು ಭರವಸೆ ನೀಡುತ್ತಿದ್ದಾರೆ. ಮುಳುಗಡೆ, ಬಗರ್‌ ಹುಕುಂ ಸಮಸ್ಯೆಗಳ ಮಾಹಿತಿ ಇದ್ದರು ಪರಿಹಾರ ಒದಗಿಸಲು ವಿಫಲರಾಗಿದ್ದಾರೆ.

ಬಗರ್‌ ಹುಕುಂ ಸಾಗುವಳಿ ಸಕ್ರಮಕ್ಕೆ ಸಲ್ಲಿಸಿದ್ದ 80 ಸಾವಿರ ರೈತರ ಅರ್ಜಿ ತಿರಸ್ಕೃತಗೊಳ್ಳಲಿದೆ. ಸರ್ಕಾರದ ಹಂತದ ಅರಣ್ಯ, ಕಂದಾಯ ಇಲಾಖೆಯಿಂದ ಸುಮಾರು 10 ಸಭೆಗಳು ನಡೆದಿದೆ. 8 ತಿಂಗಳು ಕಳೆದರು ಸಭೆ ನಿರ್ಣಯ ಪಡೆದಿಲ್ಲ. ಹಿಂದಿನ ಜಿಲ್ಲಾಧಿಕಾರಿ ಕೆ.ಎ. ದಯಾನಂದ ಅವರು ವರಾಹಿ, ಚಕ್ರ, ಸಾವೇಹಕ್ಲು, ಶರಾವತಿ ಮುಳುಗಡೆ ಸಂತ್ರಸ್ತರ ವರದಿ ತಯಾರಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ಭೂಮಿ ಕಳೆದುಕೊಂಡ ಸಂತ್ರಸ್ತರಿಗೆ ಭೂಮಿ ಹಕ್ಕು ಸಿಕ್ಕಿಲ್ಲ. ಎಲ್ಲಾ ಸಮಸ್ಯೆಗಳನ್ನು ಗಾಳಿಗೆ ತೂರಿ ರಾಜಕೀಯಕ್ಕಾಗಿ ಮುಸ್ಲಿಂ-ಹಿಂದೂ ಸಮೂದಾಯದ ನಡುವೆ ಕೋಮು ಸೌಹಾರ್ದ ಹಾಳು ಮಾಡಲಾಗುತ್ತಿದೆ ಎಂದರು.

ರಾಜ್ಯದಲ್ಲಿ ಬಿಜೆಪಿ ಬೆಳೆಸುತ್ತಿರುವ ಸಂಘನೆಗಳು ಸಮಾಜದ ಸ್ವಾಸ್ಥ್ಯ ಹಾಳು ಮಾಡುತ್ತಿವೆ. ಹಿಜಾಬ್‌, ಪಠ್ಯ, ಆಜಾನ್‌ ನಂತಹ ಸಮಸ್ಯೆಗಳನ್ನು ಎತ್ತುಕಟ್ಟುವ ಕೆಲಸದಲ್ಲಿ ತೊಡಗಿವೆ. ಕಂದಾಯ ಇಲಾಖೆಗೆ ಸಂಬಂಧಿಸಿದ ಕೆಲಸಗಳೇ ಆಗುತ್ತಿಲ್ಲ ಎಂದರು. ಪತ್ರಿಕಾಗೋಷ್ಟಿಯಲ್ಲಿ ಮಲೆನಾಡು ರೈತ ಹೋರಾಟ ಸಮಿತಿ ರಘು ವಿಠ್ಠಲ, ಗೋಪಾಲ ನಾಯ್ಕ್‌, ಸುಧೀರ್‌, ಗಂಗಾಧರ್‌ ಇದ್ದರು.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post