ಕ್ಷೇತ್ರದ ಸಮಸ್ಯೆಗೆ ಸ್ಪಂದಿಸಿದ ಗೃಹಸಚಿವ

ಆರಗ ಜ್ಞಾನೇಂದ್ರರಿಂದ ನೊಂದವರಿಗೆ ಸಾಂತ್ವಾನ

ಗೃಹಸಚಿವ ಆರಗ ಜ್ಞಾನೇಂದ್ರ ತೀರ್ಥಹಳ್ಳಿ ಕ್ಷೇತ್ರದ ಮೇಲಿನ ಅಭಿಮಾನದಿಂದ ರಾಜ್ಯದ ಒತ್ತಡದ ಕೆಲಸಗಳ ಮಧ್ಯೆ ತಾಲ್ಲೂಕಿನ ಅನೇಕ ಕಡೆಗಳಿಗೆ ಭೇಟಿ ನೀಡುವುದನ್ನು ಸಾಮಾನ್ಯ ಕಾರ್ಯಕರ್ತನಂತೆ ಚಾಚೂ ತಪ್ಪದೆ ಪಾಲಿಸುತ್ತಿದ್ದಾರೆ. ಮಂಗಳವಾರ ಶರಾವತಿ ನದಿ ಉಗಮ ಸ್ಥಾನ ಅಂಬುತೀರ್ಥದಲ್ಲಿ ನಡೆಯುತ್ತಿರುವ 5 ಕೋಟಿ ರೂಪಾಯಿಗಳ ಕಾಮಗಾರಿಯನ್ನು ಗೃಹಸಚಿವ ಆರಗ ಜ್ಞಾನೇಂದ್ರ ವೀಕ್ಷಿಸಿದರು.

ಆರಗ ಸಮೀಪದ ಗಾಗೋಳ್ಳಿ ರಮೇಶ್ ಎಂಬುವವರು ಆತ್ಮಹತ್ಯೆ ಮಾಡಿಕೊಂಡಿದ್ದು, ಅವರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ನೊಣಬೂರು ದಲಿತ ವ್ಯಕ್ತಿಯೊಬ್ಬ ಸೈಕಲ್ನಲ್ಲಿ ಚಲಿಸುವಾಗ ರಸ್ತೆ ಪಕ್ಕದ ಬಾವಿಗೆ ಬಿದ್ದು ಆಕಸ್ಮಿಕ ಮರಣ ಹೊಂದಿದ್ದರು. ಅವರ ಮನೆಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ.


ಮುಳುಬಾಗಿಲು ಪಂಚಾಯತಿ ಭೀಮನಕಟ್ಟೆಯಲ್ಲಿ ವಿದ್ಯುತ್ ತಂತಿ ತಗುಲಿ ಮರಣ ಹೊಂದಿದ ಗೌರಮ್ಮ ಎಂಬುವವರ ಮನೆಗೆ ಭೇಟಿ, ನಂತರ ಅಡಿಕೆ ಮರದಿಂದ ಬಿದ್ದು ಆಕಸ್ಮಿಕ ಅಸುನೀಗಿದ ಮೇಗರವಳ್ಳಿ ಹನಸ ವಾಸಪ್ಪ ಗೌಡರ ಮನೆಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವಾನ ಹೇಳಿ ಬೆಂಗಳೂರಿಗೆ ತೆರಳಿದ್ದಾರೆ.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post