ಉಚಿತ ಆರೋಗ್ಯ ತಪಾಸಣಾ
ಶಿಬಿರ
ನಿರ್ಮಾಣ ಕಾರ್ಮಿಕರು
ಪಾಲ್ಗೊಳ್ಳುವಂತೆ ಕೋರಿಕೆ
ಕಾರ್ಮಿಕ ಇಲಾಖೆ ಕರ್ನಾಟಕ
ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ನೊಂದಾಯಿತ ಕಟ್ಟಡ ಮತ್ತು ಇತರೆ
ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವರ ಅವಲಂಬಿತರಿಗೆ ಶಿವಮೊಗ್ಗದ ಮ್ಯಾಕ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ
ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣೆ ಆಯೋಜಿಸಲಾಗಿದೆ. ಜುಲೈ 10ರ ಭಾನುವಾರ ಶಾಂತವೇರಿ ಗೋಪಾಲಗೌಡ ರಂಗಮಂದಿರದಲ್ಲಿ
ಕಾರ್ಮಿಕರ ಆರೋಗ್ಯ ತಪಾಸಣಾ ಶಿಬಿರವನ್ನು ಗೃಹಸಚಿವ ಆರಗ ಜ್ಞಾನೇಂದ್ರ ಉದ್ಘಾಟಿಸಲಿದ್ದಾರೆ.
ಕಾರ್ಮಿಕ ಮಂಡಳಿಯಿಂದ ನೀಡಲಾದ ನೋಂದಣಿ ಕಾರ್ಡ್, ಆಧಾರ್ ಕಾರ್ಡ್ ಮತ್ತು ಅವಲಂಬಿತರು ರೇಷನ್ ಕಾರ್ಡ್ ಪ್ರತಿಯೊಂದಿಗೆ ತಪಾಸಣೆ ಮಾಡಿಕೊಳ್ಳಬಹುದು. ಕಾರ್ಯಕ್ರಮದಲ್ಲಿ ತೀರ್ಥಹಳ್ಳಿ ಕಾರ್ಮಿಕ ವೃತ್ತ ನಿರೀಕ್ಷಕರಾದ ಮುಮ್ತಾಜ್ ಬೇಗಂ, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಶಬನಮ್, ಉಪಾಧ್ಯಕ್ಷ ಜಯಪ್ರಕಾಶ್ ಶೆಟ್ಟಿ ಮತ್ತು ಪಟ್ಟಣ ಪಂಚಾಯಿತಿ ಸದಸ್ಯರು ಭಾಗವಹಿಸಲಿದ್ದಾರೆ.
ಆರೋಗ್ಯ ತಪಾಸಣಾ ಶಿಬಿರಕ್ಕೆ ತಾಲ್ಲೂಕಿನ ಎಲ್ಲಾ ಕಾರ್ಮಿಕರು ಭಾಗವಹಿಸುವಂತೆ ಮೇಲಿನ ಕುರುವಳ್ಳಿ ಪೃಥ್ವಿಶ್ರಮ ಕಲ್ಲುಗಣಿ ಹಾಗೂ ನಿರ್ಮಾಣ ಶ್ರಮಿಕರ ಸರ್ವೋದಯ ಸಂಘ (ರಿ) ಕಾರ್ಯದರ್ಶಿ ಮಂಜುನಾಥ್ ಎಸ್ ಕೋರಿದ್ದಾರೆ.


.jpeg)