ಎಫ್‌ಐಆರ್‌ ದಾಖಲಿಸುವಂತೆ ಡಿವೈಎಸ್‌ಪಿಗೆ ಪತ್ರ

ವಿನಯ್‌ ಗುರೂಜಿ ವಿರುದ್ದ ಅವಹೇಳನಕಾರಿ ಪೋಸ್ಟ್‌

ತಲಬಿ ರಾಘವೇಂದ್ರ, ಭಕ್ತವೃಂದದಿಂದ ದೂರು

ಸಾಮಾಜಿಕ ಜಾಲತಾಣದಲ್ಲಿ ಅವಧೂತ ವಿನಯ್‌ ಗುರೂಜಿ ವಿರುದ್ದ ದ್ವೇಷ, ಸುಳ್ಳು ಮಾಹಿತಿಯಿಂದ ಕೂಡಿದ ಪೋಸ್ಟ್‌ಗಳು ಹರಿದಾಡುತ್ತಿವೆ. ಸುರೇಶ್‌ ಕೋಣೆಮನೆ ಮತ್ತು ಅಪರಿಚಿತ ವ್ಯಕ್ತಿಗಳು ವಿನಾಕಾರಣರ ಭಕ್ತರ ನಂಬಿಕೆಗೆ ಘಾಸಿ ಮಾಡುವ ಸಂದೇಶಗಳನ್ನು ನಿರಂತರ ಹರಿಬಿಡುತ್ತಿದ್ದಾರೆ. ಗೂರೂಜಿ ನೀಡಿದ ಸಂದೇಶ, ಅಶೀರ್ವಾದದಿಂದ ಭಕ್ತರ ಸಮಸ್ಯೆಗೆ ಪರಿಹಾರ ದೊರೆತಿದೆ. ಕಳಂಕ ರಹಿತ ಪ್ರತಿಷ್ಠೆ ಹೊಂದಿರುವ ಅವರು ಆರೋಗ್ಯ, ಪೌಷ್ಠಿಕತೆ, ಶಿಕ್ಷಣ, ನೈರ್ಮಲ್ಯ, ಪರಿಸರದ ಅರಿವು, ಗೋ ಸಂರಕ್ಷಣೆ, ಆಯುರ್ವೇದ ಸಂರಕ್ಷಣೆ ಮುಂತಾದ ಕ್ಷೇತ್ರದಲ್ಲಿ ಅಪಾರ ಕಲ್ಯಾಣ ಕಾರ್ಯಕ್ರಮ ನಡೆಸುತ್ತಿದ್ದಾರೆ. ಗೂರೂಜಿ ಅವರ ಧಾರ್ಮಿಕ ಕೆಲಸ ಸಹಿಸದೆ ಕಿಡಿಗೇಡಿಗಳು ತೇಜೋವಧೆ ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸಂದೇಶ ರವಾನಿಸುತ್ತಿರುವವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಆರೋಪಿಗಳ ವಿರುದ್ದ ಎಫ್‌ಐಆರ್‌ ದಾಖಲಿಸಬೇಕು ಎಂದು ತೀರ್ಥಹಳ್ಳಿ ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ತಲಬಿ ರಾಘವೇಂದ್ರ ಮತ್ತು ವಿನಯ್‌ ಗುರೂಜಿ ಭಕ್ತವೃಂದ ಡಿವೈಎಸ್‌ಪಿ ಶಾಂತವೀರ್‌ ಅವರಿಗೆ ದೂರು ನೀಡಿದ್ದಾರೆ.




ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post