ಮಳೆಹಾನಿ ಪರಿಹಾರ ವಿಳಂಬ

ಗೃಹಸಚಿವರ ವ್ಯರ್ಥ ಓಡಾಟ
ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು ಈಗೆಲ್ಲಿ…?
ಶೀಘ್ರ ಪರಿಹಾರಕ್ಕೆ ಅಮರನಾಥ್ ಶೆಟ್ಟಿ ಆಗ್ರಹ
ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಮಳೆಯಿಂದ ಭಾರಿ ಪ್ರಮಾಣದ ಹಾನಿಯಾಗಿದೆ. ಗೃಹಸಚಿವ ಆರಗ ಜ್ಞಾನೇಂದ್ರ ಒತ್ತಡದ ನಡುವೆಯೂ ತಾಲ್ಲೂಕಿನಲ್ಲಿ ಆಗಿರುವ ಹಾನಿಗಳನ್ನು ವೀಕ್ಷಿಸುವ ಪ್ರಯತ್ನ ಮಾಡಿದ್ದಾರೆ. ಆದರೆ ರಾಜ್ಯ ಸರ್ಕಾರ ಶೀಘ್ರ ಪರಿಹಾರ ನೀಡುವ ಕೆಲಸ ಇನ್ನೂ ಆರಂಭಿಸಿಲ್ಲ. ಜಿಲ್ಲೆಯ ಸಮಸ್ಯೆಗಳನ್ನು ಆಲಿಸುವ ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣ ಗೌಡ ಹಾಗೂ ಸಂಸದ ಬಿ.ವೈ. ರಾಘವೇಂದ್ರ ತೀರ್ಥಹಳ್ಳಿಯನ್ನು ನಿರ್ಲಕ್ಷಿಸಿದ್ದಾರೆ. ಎಲ್ಲಾ ತಾಲ್ಲೂಕು ಕೇಂದ್ರಗಳಿಗೂ ಭೇಟಿ ನೀಡಿ ಶೀಘ್ರ ಪರಿಹಾರ ಒದಗಿಸುವ ಕೆಲಸ ಮಾಡಲಾಗುತ್ತಿದೆ. ಆದರೆ ತಾಲ್ಲೂಕಿನಲ್ಲಿ ಆಗಿರುವ ಮಳೆಹಾನಿಗೆ ಪರಿಹಾರ ನೀಡುತ್ತಿಲ್ಲ. ಕಾಟಾಚಾರದ ಓಡಾಟ ಮಾಡಲು ಮಾತ್ರ ಗೃಹಸಚಿವ ಆರಗ ಜ್ಞಾನೇಂದರ ಸೀಮಿತರಾಗಿದ್ದಾರೆ ಎಂದು ತೀರ್ಥಹಳ್ಳಿ ಯುವ ಕಾಂಗ್ರೆಸ್‌ ಅಧ್ಯಕ್ಷ ಅಮರನಾಥ ಶೆಟ್ಟಿ ಆರೋಪಿಸಿದ್ದಾರೆ.
ತೀರ್ಥಹಳ್ಳಿಯಲ್ಲಿ ಈವರೆಗೂ 100ಕ್ಕೂ ಹೆಚ್ಚು ಮನೆಗಳು ಹಾಳಾಗಿವೆ. ಗಾಳಿ ಮಳೆಗೆ ಮರಗಳು ಬಿದ್ದು ರಸ್ತೆ ಸಂಚಾರಕ್ಕೆ ಅಡ್ಡಿಯಾಗಿದೆ. ಗ್ರಾಮೀಣ ಪ್ರದೇಶದಲ್ಲಿ ವಿದ್ಯುತ್‌ ಇಲ್ಲದೆ ರೈತಾಪಿ, ಬಡವರ್ಗ ಪರದಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಮೈಚಳಿ ಬಿಟ್ಟು ಕೆಲದ ಮಾಡುವ ಅಧಿಕಾರಿಗಳು ಸಮಸ್ಯೆ ಆಲಿಸುವ ಕೆಲಸ ಮಾಡುತ್ತಿಲ್ಲ. ಮನೆ ನೆಲಸಮಗೊಂಡರು ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡದೆ ನಿರ್ಲಕ್ಷ್ಯ ತೋರುತ್ತಿದ್ದಾರೆ. ವಿಶೇಷ ಕಾರ್ಯಕ್ರಮಗಳ ಅತಿಥಿಯಾಗಿ ಆಗಮಿಸುವ ಉಸ್ತುವಾರಿ ಸಚಿವರು, ಸಂಸದರು ಜನರ ಸಮಸ್ಯೆ ಕೇಳುತ್ತಿಲ್ಲ. ಮಳೆಯಿಂದ ಹಾನಿಗೊಳಗಾದ ಕುಟುಂಬಗಳಿಗೆ ಶೀಘ್ರ ಪರಿಹಾರ ನೀಡಬೇಕು ಎಂದು ಅಮರನಾಥ ಶೆಟ್ಟಿ ಆಗ್ರಹಿಸಿದ್ದಾರೆ.
ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post