ಕಿಮ್ಮನೆ ರತ್ನಾಕರ್‌ ಹುಟ್ಟುಹಬ್ಬ

ಮೊಬೈಲ್‌ ಫೋನ್‌ ಸ್ವಿಚ್‌ ಆಫ್‌
ಶುಭಕೋರಲು ಕೊಸರಾಡಿದ ಕಾರ್ಯಕರ್ತರು

ನಿರಂತರ ನಾಲ್ಕು ದಶಕಗಳ ರಾಜಕೀಯ ಜೀವನದಲ್ಲಿ ಸಜ್ಜನಿಗೆ, ಸರಳತೆ ಉಳಿಸಿಕೊಂಡ ಮಾದರಿ ನಾಯಕ ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ಹುಟ್ಟುಹಬ್ಬ ದೇಶ ವಿದೇಶದಿಂದ ಶುಭಾಷಯಗಳ ಮಹಾಪೂರ ಬಂದಿದೆ. ರಾಜ್ಯ, ರಾಷ್ಟ್ರ ನಾಯಕರು ಕಿಮ್ಮನೆಗೆ ಫೋನ್‌ ಮೂಲಕ ಶುಭಾಷಯ ಕೋರಿದರು. ಸಾಮಾಜಿಕ ಜಾಲತಾಣದಲ್ಲೂ ವಿವಿಧ ಬಗೆಯ ಫೋಟೊ ವಿಡೀಯೋ ಮೂಲಕ ವಿಭಿನ್ನವಾಗಿ ಶುಭಾಷಯ ಕಾಣಿಸಿಕೊಂಡವು.

1951ರಲ್ಲಿ ತೀರ್ಥಹಳ್ಳಿ ತಾಲ್ಲೂಕಿನ ಸಾಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಿಮ್ಮನೆಯಲ್ಲಿ ಅವರು ಜನಿಸಿದರು. 71ನೇ ವರ್ಷದ ಹುಟ್ಟುಹಬ್ಬದ ಸಡಗರವನ್ನು ಕಾರ್ಯಕರ್ತರು ಪಕ್ಷದ ಮುಖಂಡರು ಮಂಗಳೂರಿನಲ್ಲಿ ಆಚರಿಸಿದರು. ಬೆಳಗ್ಗಿನಿಂದ ಕಿಮ್ಮನೆ ಮೊಬೈಲ್‌ ಸ್ವಿಚ್‌ ಆಫ್‌ ಆಗಿದ್ದರಿಂದ ಕೆಲವು ಕಾರ್ಯಕರ್ತರು ಫೋನ್‌ ಮೂಲಕ ಶುಭ ಕೋರಲು ಆಗಲಿಲ್ಲ ಎಂದು ನೆಲದ ಧ್ವನಿಯೊಂದಿಗೆ ಬೇಸರ ವ್ಯಕ್ತಪಡಿಸಿದರು. ಹುಟ್ಟುಹಬ್ಬವನ್ನು ಸಡಗರದಿಂದ ಆಚರಿಸುವ ಹುಮ್ಮಸ್ಸು ಹೊಂದಿದ್ದ ಕಾರ್ಯಕರ್ತರಿಗೆ ಕಿಮ್ಮನೆ ಮಾತಿಗೂ ಸಿಗದಿರುವುದು ಬೇಸರಕ್ಕೆ ಕಾರಣವಾಗಿದೆ. ಹೀಗಾಗಿ ಹುಟ್ಟಿದ ದಿನದ ಸಂಭ್ರಮವನ್ನು ಮುಂದಿನ ದಿನದಲ್ಲಿ ತೀರ್ಥಹಳ್ಳಿಯಲ್ಲಿ ಸಡಗರದಿಂದ ಆಚರಣೆ ಮಾಡಲು ಸಿದ್ದತೆ ಮಾಡಿಕೊಳ್ಳುತ್ತಿದ್ದಾರೆ ಎಂದು ತಿಳಿದುಬಂದಿದೆ.


ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post