ಗಾಂಜಾ ಆರೋಪಕ್ಕೆ ಸಂಚು ಬಂಧನ

ಐವರ ವಿರುದ್ದ ಪ್ರಕರಣ ದಾಖಲು
ಗಾಂಜಾದಿಂದ ಕೊಲೆ ಸಂಚಿನವರೆಗೆ...!

ತೀರ್ಥಹಳ್ಳಿ: ಸಾಮಾಜಿಕ ಜಾಲತಾಣದಲ್ಲಿ ಚರ್ಚ್‌ ವಿರುದ್ದ ಅವಹೇಳನಕಾರಿ ಹೇಳಿಕೆ ನೀಡುತ್ತಿದ್ದಾರೆ ಎಂಬ ಕಾರಣಕ್ಕೆ ಗಾಂಜಾ ಹಾಗೂ ಕೊಲೆಗೆ ಸಂಚು ರೂಪಿಸಿದ್ದ ಇಬ್ಬರು ಅರೋಪಿಗಳನ್ನು ತೀರ್ಥಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗದ ನಿಸಾರ್ (55), ಬೆಂಗಳೂರಿನ ಅಲೆಕ್ಸ್ (42) ಬಂಧಿತರು.

ಜುಲೈ 17ರ ರಾತ್ರಿ ಮಂಗಳೂರಿನಿಂದ ಶಿವಮೊಗ್ಗಕ್ಕೆ ಗಾಂಜಾ ಸಾಗಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಡಿವೈಎಸ್‌ಪಿ ಶಾಂತವೀರ್‌ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದ್ದಾರೆ. 70 ಸಾವಿರ ಮೌಲ್ಯದ ಒಟ್ಟು 2 ಕೆ.ಜಿ 300 ಗ್ರಾಂ ತೂಕದ ಒಣ ಗಾಂಜಾವನ್ನು ಸಾಗಿಸುತ್ತಿದ್ದ ಆರೋಪದ ಮೇಲೆ ಅಜೀಲ್ (37), ಸಜ್ಜು ಫ್ರಾನ್ಸಿಸ್ (40) ದಸ್ತಗಿರಿ ಮಾಡಿ ವಿಚಾರಣೆ ನಡೆಸಿದ್ದರು.

ವಿಚಾರಣೆ ವೇಳೆ ಅಜೀಲ್‌ ಅವರನ್ನು ಗಾಂಜಾ ಕೇಸ್‌ನಲ್ಲಿ ಸಿಕ್ಕಿಹಾಕಿಸುವುದು. ಸಜ್ಜು ಫ್ರಾನ್ಸಿನ್ಸ್‌ ಅವರನ್ನು ಕಾರು ಅಪಘಾತದಲ್ಲಿ ಕೊಲೆ ಮಾಡಿಸುವ ಸುಪಾರಿ ಕೊಟ್ಟ ವಿಷಯ ಭಹಿರಂಗವಾಗಿದೆ. ಸುಪಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಅಫ್ರೋಜ್ ಅಹಮ್ಮದ್ (37) ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಆತನಿಂದ ₹80 ಸಾವಿರ ನಗದು ಸೇರಿದಂತೆ ಮೊಬೈಲ್‌ ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ತೀರ್ಥಹಳ್ಳಿ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post