ಗುಮಾನಿಗೆ ಕಾರಣವಾದ ಅಡ್ಡ ಮತದಾನ

ಕನ್ನಂಗಿ ಸೊಸೈಟಿ ನೂತನ ಅಧ್ಯಕ್ಷರಾಗಿ ಸಿರಿಬೈಲು ಕೃಷ್ಣಮೂರ್ತಿ
ಬಿಜೆಪಿ‌ ಬೆಂಬಲಿತರ ರಾಜಕೀಯ ಆಟಕ್ಕೆ ಕಾಂಗ್ರೆಸ್ ಗೆ ಪ್ರಯಾಸ

ತೀರ್ಥಹಳ್ಳಿ ತಾಲೂಕಿನ ರಾಜಕೀಯ ವಲಯದಲ್ಲಿ ಬಾರೀ ಕುತೂಹಲ ಮೂಡಿಸಿದ್ದ ಕನ್ನಂಗಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಧ್ಯಕ್ಷರ ಆಯ್ಕೆ ಕೊನೆಗೆ ಕಗ್ಗಂಟ್ಟಿನಲ್ಲೇ ಕೊನೆಗೊಂಡಿದೆ.
ಶುಕ್ರವಾರ ನಡೆದ ಚುನಾವಣೆಯಲ್ಲಿ ಬಹುಮತ ಇದ್ದರು ಸಿರಿಬೈಲು ಕೃಷ್ಣಮೂರ್ತಿ  ಪ್ರಯಾಸದಲ್ಲಿ ಅಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ.
2ವರ್ಷದ ಹಿಂದೆ ಅಧ್ಯಕ್ಷರಾಗಿ ಆಯ್ಕೆಗೊಂಡಿದ್ದ ಹೊರಬೈಲು ರಾಮಕೃಷ್ಣ ಒಪ್ಪಂದ ಅನ್ವಯ ಅಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡದ ಕಾರಣ ಬಾರೀ ಗೊಂದಲ‌ ಉಂಟಾಗಿತ್ತು. ಕೊನೆಯಲ್ಲಿ ಒತ್ತಡ ಹೆಚ್ಚಾದ ಕಾರಣ ರಾಮಕೃಷ್ಣ ಅಧ್ಯಕ್ಷ ಹುದ್ದೆಗೆ ರಾಜೀನಾಮೆ ಸಲ್ಲಿಸಿದರು.
ಹೊಸ ಅಧ್ಯಕ್ಷರ ಆಯ್ಕೆ ಮಾತ್ರ ಆಡಳಿತ ಮಂಡಳಿಯಲ್ಲಿ ಬಹುಮತ ಹೊಂದಿದ್ದ ಗುಂಪಿನವರು ಅಂದುಕೊಂಡಷ್ಟು ಸಲೀಸಾಗಿ ಆಗಿಲ್ಲ. ಬಿಜೆಪಿ ಬೆಂಬಲಿತ ಸದಸ್ಯರು ಹೊಸ ಅಧ್ಯಕ್ಷರ ಚುನಾವಣೆಯಲ್ಲಿ ತೋರಿದ ರಾಜಕೀಯದಾಟ ಕುತೂಹಲದ ಬೆಳವಣಿಗೆ ಸೃಷ್ಟಿ ಮಾಡಿದೆ.
ಆಡಳಿತ ಮಂಡಳಿಯಲ್ಲಿ ಕಾಂಗ್ರೆಸ್ ಬೆಂಬಲಿತ 8, ಬಿಜೆಪಿ ಬೆಂಬಲಿತ 4 ಸದಸ್ಯರಿದ್ದರು.
ಅಧ್ಯಕ್ಷರ ಆಯ್ಕೆ ಚುನಾವಣೆಯಲ್ಲಿ ಕಾಂಗ್ರೆಸ್  ಬೆಂಬಲಿತ ಸದಸ್ಯರ ಬೆಂಬಲದ ಸಿರಿಬೈಲು ಕೃಷ್ಣಮೂರ್ತಿ 7, ಬಿಜೆಪಿ ಬೆಂಬಲಿತ ಸದಸ್ಯರ ಬೆಂಬಲದ ಹೊನಾಸುಗದ್ದೆ ವಿಷ್ಣುಮೂರ್ತಿ 5 ಸದಸ್ಯರ ಮತ ಪಡೆದರು.
ಬಿಜೆಪಿ ಬೆಂಬಲಿತ ಸದಸ್ಯರ ಅಭ್ಯರ್ಥಿ ಹೊನಾಸುಗದ್ದೆ ವಿಷ್ಣುಮೂರ್ತಿ 1ಹೆಚ್ಚಿನ ಮತ ಪಡೆದಿರುವುದು ಈಗ ಗುಮಾನಿಗೆ ಕಾರಣವಾಗಿದೆ. ಕಾಂಗ್ರೆಸ್ ಬೆಂಬಲಿತ ಸದಸ್ಯರ ಪೈಕಿ ಯಾರು ಅಡ್ಡ ಮತದಾನ ಮಾಡಿದ್ದಾರೆ ಎಂಬ ಚರ್ಚೆ ಆರಂಭವಾಗಿದೆ.
ಕನ್ನಂಗಿ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಅಡ್ಡ ಮತದಾನದ ನಡುವೆ ನೂತನ ಅಧ್ಯಕ್ಷರಾಗಿ ಸಿರಿಬೈಲು ಕೃಷ್ಣಮೂರ್ತಿ ಆಯ್ಕೆಯಾಗಿದ್ದಾರೆ.
ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post