ದುರಸ್ಥಿ ಕಾರ್ಯಾಚರಣೆಗೆ ಚಾಲನೆ

11ನೇ ತಿರುವಿನಲ್ಲಿ ಜೆಸಿಬಿ ಕಾರ್ಯಾಚರಣೆ

ಬೆಳ್ಳಂಬೆಳಗ್ಗೆ ಘಾಟಿ ಸಂಚಾರ ಬಂದ್‌

ಶಿವಮೊಗ್ಗ ಉಡುಪಿ ರಾಷ್ಟ್ರೀಯ ಹೆದ್ದಾರಿ 169ಎ ಆಗುಂಬೆ ಘಾಟಿ 11ನೇ ತಿರುವು ಕುಸಿದಿದ್ದು ತೆರವು ಕಾರ್ಯಾಚರಣೆ ಭರದಿಂದ ಸಾಗಿದೆ. ವ್ಯಾಪಕವಾಗಿ ಮಳೆ ಸುರಿದ್ದು ಮಳೆಯ ಆಘಾತಕ್ಕೆ ಮರದೊಂದಿಗೆ ಧರೆ ಕುಸಿದಿದೆ. ಲೋಕೋಪಯೋಗಿ ಇಂಜಿನಿಯರ್‌ ನವೀನ್‌ ರಾಜ್‌, ಶಶಿಧರ್‌ ಬೆಳಗ್ಗಿನಿಂದ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ.

ಸಂಚಾರ ಸಂಪೂರ್ಣ ಬಂದ್ ಆಗಿದೆಘಾಟಿ ಕೆಳಗೆ ಸೋಮೇಶ್ವರ ಚೆಕ್​​ಪೋಸ್ಟ್​ ಬಳಿಯಲ್ಲಿಯೇ ವಾಹನಗಳನ್ನು ತಡೆಯಲಾಗುತ್ತಿದೆಮೇಲ್ಬಾಗ ಆಗುಂಬೆ ಘಾಟಿ ಚೆಕ್ಪೋಸ್ಟ್​ ಬಳಿಯೇ ವಾಹನಗಳನ್ನು ವಾಪಸ್​ ಕಳುಹಿಸಲಾಗುತ್ತಿದೆ.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post