ಸಂಘಟನಾ ಚತುರರಿಗೆ ಮಹತ್ವದ ಜವಾಬ್ದಾರಿ ನೀಡಿದ ಪಕ್ಷ

ಹೆದ್ದೂರು ನವೀನ್‌ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ
ರಕ್ಷಿತ್‌ ಮೇಗರವಳ್ಳಿ ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿ

ಶಿವಮೊಗ್ಗ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ ಹೆದ್ದೂರು ನವೀನ್‌ ಆಯ್ಕೆಯಾಗಿದ್ದಾರೆ. ಬಿಜೆಪಿಯ ಅತ್ಯಂತ ನಿಷ್ಠ ಹಾಗೂ ಸಂವೇದನಾಶೀಲ ಯುವ ಮುಖಂಡ ಎಂಬ ಗೌರವಕ್ಕೆ ಪಾತ್ರವಾಗಿರುವ ನವೀನ್‌ ಇನ್ನು ಮುಂದೆ ಜಿಲ್ಲೆಯ ಜವಾಬ್ದಾರಿಯನ್ನು ನಿಭಾಯಿಸಲಿದ್ದಾರೆ.

ತೀರ್ಥಹಳ್ಳಿ ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ ರಕ್ಷಿತ್‌ ಮೇಗರವಳ್ಳಿ ನೇಮಕಗೊಂಡಿದ್ದಾರೆ. ಇದಕ್ಕೂ ಮೊದಲು ಜಿಲ್ಲಾ ಬಿಜೆಪಿ ಯುವಮೋರ್ಚಾ ಉಪಾಧ್ಯಕ್ಷರಾಗಿ ಜವಾಬ್ದಾರಿ ನಿರ್ವಹಿಸುತ್ತಿದ್ದರು. ರಕ್ಷಿತ್‌ ತಾಲ್ಲೂಕಿನಾದ್ಯಂತ ಯುವಪಡೆಯನ್ನು ಸಂಘಟಿಸುವಲ್ಲಿ ಸಿದ್ದಹಸ್ತರಾಗಿದ್ದು ವಿಶೇಷವಾಗಿ ಕಳೆದ ಬಾರಿ ಆರಗ ಜ್ಞಾನೇಂದ್ರರವರು ದಾಖಲೆ ಅಂತರದ ಜಯ ಸಾಧಿಸುವಲ್ಲಿ ಇವರ ನೇತೃತ್ವದ ಯುವಪಡೆ ಅಪಾರ ಸವಾಲುಗಳನ್ನು ನಿರ್ವಹಿಸಿ ಕಾರ್ಯ ನಿರ್ವಹಿಸಿತ್ತು.


ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post