ಆಗುಂಬೆ ಘಾಟಿಯಲ್ಲಿ ಬಿದ್ದ ಮರ

ಒಂದು ಗಂಟೆಯಿಂದ ಆಗುಂಬೆ ಘಾಟಿಯಲ್ಲಿ ವಾಹನ ಸಂಚಾರ ಬಂದ್‌

7 ಗಂಟೆಗೆ ಧರೆಗುರುಳಿದ ಮರ

11ನೇ ತಿರುವಿನಲ್ಲಿ ಮರ ತೆರವಿಗೆ ಪರದಾಟ
ಅರಣ್ಯ ಇಲಾಖೆ, ಹೆದ್ದಾರಿ ಪ್ರಾಧಿಕಾರದಿಂದ ಪ್ರಯಾಣಿಕರ ನಿರ್ಲಕ್ಷ್ಯ

ದಕ್ಷಿಣದ ಚಿರಾಪುಂಜಿ ಆಗುಂಬೆಯಲ್ಲಿ  267 ಮಿಲಿ ಮೀಟರ್‌ ಮಳೆ ದಾಖಲಾಗುತ್ತಿದೆ. ಮಳೆಕಾಡಿನ ನಡುವೆ ಮರ ಬಿದ್ದು ಗಂಟೆಗಳು ಕಳೆಯುತ್ತಿದ್ದರು ತೆರವು ಕಾರ್ಯಾಚರಣೆಗೆ ಅರಣ್ಯ ಇಲಾಖೆ ಮುಂದಾಗಿರಲಿಲ್ಲ. ಶಿವಮೊಗ್ಗ, ತೀರ್ಥಹಳ್ಳಿ, ಕೊಪ್ಪ, ಶೃಂಗೇರಿ ಮಾರ್ಗವಾಗಿ ಮಣಿಪಾಲ, ಉಡುಪಿ, ಮಂಗಳೂರು ಕಡೆಗೆ ಹೋಗುವ ಪ್ರಯಾಣಿಕರಿಗೆ ತೊಂದರೆಯುಂಟಾಗಿತ್ತು.

ಗುರುವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿ 169ಎ ಮಾರ್ಗ ಮಧ್ಯೆಯ 18ನೇ ಸುತ್ತಿನಲ್ಲಿ ಮರ ಬಿದ್ದು ಒಂದು ಗಂಟೆಯ ಮೇಲೆ ಸಾರ್ವಜನಿಕರು, ಇಲಾಖೆಯಿಂದ ತೆರವು ಕಾರ್ಯಾಚರಣೆ ನಡೆಸಿದರು. ಅರಣ್ಯ ಇಲಾಖೆ ಉಪ ವಲಯಾರಣ್ಯಾಧಿಕಾರಿ ಗುರುರಾಜ್‌, ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಮರ ತೆರವಿಗೆ ಸಹಕರಿಸಿದರು.


ಆಗುಂಬೆ ಘಾಟಿ ನೋಡಲು ಮಾತ್ರ ಸುಂದರವಾಗಿ ಕಾಣಿಸುತ್ತಿದ್ದರು ರಾತ್ರಿ ವೇಳೆ ಭಯಂಕರ ಅನುಭವ ನೀಡುತ್ತದೆ. ಮರ ಬಿದ್ದರೆ, ಅಪಘಾತ ಸಂಭವಿಸಿದರೆ ಹೆದ್ದಾರಿ ಪ್ರಾಧಿಕಾರದಿಂದ ಯಾವುದೇ ಸೌಲಭ್ಯ ಸಿಗುತ್ತಿಲ್ಲ. ಮರ ಕಟ್ಟಿಂಗ್‌, ಟೋಯಿಂಗ್‌, ಪ್ರಾಥಮಿಕ ಚಿಕಿತ್ಸೆ ಯಾವುದೂ ಕೂಡ ಈ ಭಾಗದಲ್ಲಿ ಸಿಗುವುದಿಲ್ಲ. ಅರಣ್ಯ ಇಲಾಖೆ ಈ ಬಗ್ಗೆ ಹೆಚ್ಚಿನ ಗಮನ ಹರಿಸುತ್ತಿದ್ದರೂ ಮರ ತೆರವು ಕಾರ್ಯಾಚರಣೆ ನಿರ್ಲಕ್ಷ್ಯಕ್ಕೆ ಒಳಗಾಗಿದೆ. ಪದೇ ಪದೇ ಇಂತಹ ಘಟನೆಗಳು ಮರುಕಳಿಸುತ್ತಿದ್ದು ಇತ್ತೀಚೆಗೆ ಮರವೊಂದು ಬಿದ್ದು ಸಂಚಾರಕ್ಕೆ ಅಡ್ಡಿಯುಂಟು ಮಾಡಿತ್ತು. ಬೀಳುವ ಹಂತದಲ್ಲಿರುವ ಮರಗಳ ತೆರವು ಕೆಲಸ ಕೂಡ ನಡೆಯದೇ ಇರುವುದು ಪ್ರಯಾಣಿಕರಿಗೆ ತೊಂದರೆಯುಂಟು ಮಾಡುತ್ತಿದೆ.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post