ಅಯ್ಯೋ.. ದೇವರೇ ಮೇಘಸ್ಫೋಟ

ಪ್ರಸಿದ್ಧ ಯಾತ್ರಾ ಸ್ಥಳ ಅಮರನಾಥದಲ್ಲಿ ಪ್ರಕೃತಿ ವಿಕೋಪ
ತೀರ್ಥಹಳ್ಳಿ, ಶಿವಮೊಗ್ಗದ ಡೇರೆಗಳು ಸೇಫ್‌ ತಾನೆ…?
ಜಿಲ್ಲೆಯ 500ಕ್ಕೂ ಹೆಚ್ಚು ಪ್ರವಾಸಿಗರು ಹೇಗಿದ್ದಾರೆ..!

ದಕ್ಷಿಣ ಕಾಶ್ಮೀರದ ಶ್ರೀನಗರದ ಹಿಮಾಲಯದ ತಪ್ಪಲಿನ ಪ್ರಸಿದ್ಧ ಯಾತ್ರಾಸ್ಥಳ ಅಮರನಾಥದಲ್ಲಿ ಶುಕ್ರವಾರ ಸಂಜೆ 5.30ರ ಹೊತ್ತಿಗೆ ಮೇಘ ಸ್ಫೋಟವಾಗಿದ್ದು, ಕನಿಷ್ಠ 15 ಮಂದಿ ಮೃತಪಟ್ಟಿದ್ದಾರೆ. 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. 25ಕ್ಕೂ ಹೆಚ್ಚು ಡೇರೆಗಳು ನಾಶವಾಗಿವೆ. ಮೂರು ಸಾಮೂಹಿಕ ಭೋಜನಗೃಹಗಳಿಗೆ ಹಾನಿಯಾಗಿದೆ. ಮೇಘಸ್ಫೋಟದ ಬಳಿಕ ಭಾರಿ ಮಳೆ ಸುರಿದಿದ್ದು, ಮಳೆಯಿಂದಾಗಿ ಪ್ರವಾಹದಂತಹ ಸ್ಥಿತಿಯಲ್ಲಿ ವೇಗವಾಗಿ ನುಗ್ಗಿದ ನೀರಿನಿಂದ ಡೇರೆಗಳು ಕೊಚ್ಚಿ ಹೋಗಿವೆ ಎಂದು ಸರ್ಕಾರದ ವಲಯದಿಂದ ಮಾಹಿತಿಗಳು ಪ್ರಸಾರವಾಗುತ್ತಿವೆ.

ಈ ನಡುವೆ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸುಮಾರು 64 ಗ್ರಾಮ ಪಂಚಾಯಿತಿಗಳಿಂದ ತಲಾ ಇಬ್ಬರಂತೆ ತಾಲ್ಲೂಕು ಬಿಜೆಪಿ ನೇತೃತ್ವದಲ್ಲಿ ಯಾತ್ರೆಗೆ ಕಳುಹಿಸಲಾಗಿದೆ ಎಂಬ ಮಾಹಿತಿ ಹರಿದಾಡುತ್ತಿದೆ. ಕೆಲವು ಪಂಚಾಯಿಗಳಿಂದ ಯಾರು ಹೋಗಿಲ್ಲ, ಬಲ್ಲಮೂಲಗಳ ಪ್ರಕಾರ ಅಂದಾಜು 50ಕ್ಕೂ ಹೆಚ್ಚು ಮಂದಿ ತೆರಳಿರಬಹುದು ಎಂದು ಅಂದಾಜು ಲೆಕ್ಕಾಚಾರ ನಡೆಯುತ್ತಿದೆ.


ಶಿವಮೊಗ್ಗ ಜಿಲ್ಲೆಯಿಂದಲೂ ಬಿಜೆಪಿ ಪಕ್ಷದ ನೇತೃತ್ವದ ಯಾತ್ರಾ ಸಮಿತಿ ಆಯ್ದ ವ್ಯಕ್ತಿಗಳಿಗೆ ಅಮರನಾಥ ಯಾತ್ರೆ ಪ್ರವಾಸದ ಪ್ಯಾಕೇಜ್‌ ನೀಡಿದ್ದಾರೆ ಎಂಬ ವದಂತಿ ಹರಿದಾಡುತ್ತಿದೆ. ಅಂದಾಜು ಜಿಲ್ಲೆಯಿಂದ ಸುಮಾರು 500ಕ್ಕೂ ಹೆಚ್ಚು ಭಕ್ತರು ಪ್ರವಾಸ ಕೈಗೊಂಡರಬಹುದು ಎಂದು ಅಂದಾಜಿಸಲಾಗಿದ್ದು ಅವರೆಲ್ಲರೂ ಕೂಡ ಕಳೆದ ಒಂದು ವಾರದ ಹಿಂದೆ ಪ್ರವಾಸಕ್ಕೆ ತೆರಳಿರುವುದಾಗಿ ಮಾಹಿತಿ ಇದೆ.

ಆದರೆ ತೀರ್ಥಹಳ್ಳಿಯಿಂದ ಆಯ್ದವರನ್ನು ಯಾತ್ರೆಗೆ ಕಳುಹಿಸಿದರೆ ತೊಂದರೆ ಎಂಬ ಕಾರಣಕ್ಕೆ ಶಾಸಕರು ತಟಸ್ತರಾಗಿದ್ದರಂತೆ. ಹೀಗಾಗಿ ಈ ಬಗ್ಗೆ ಕೆಲವೇ ಮಂದಿಗೆ ಮಾತ್ರ ಮಾಹಿತಿ ಲಭ್ಯವಾಗಿದ್ದು ಪಕ್ಷದೊಳಗೂ ಬಹಿರಂಗ ಮಾಹಿತಿ ಇಲ್ಲ. ಜಿಲ್ಲೆಯಿಂದ ಯಾತ್ರೆಗೆ ಕಳುಹಿಸಲು ಒಂದು ವ್ಯವಸ್ಥೆ ಕೂಡ ಇದೆ ಎಂದು ತಿಳಿದು ಬಂದಿದೆ.

ಈವರೆಗೂ ಈ ಬಗ್ಗೆ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ. ಕಳೆದ ಒಂದು ವಾರದ ಹಿಂದೆ ನಡೆದ ಬೆಳವಣಿಗೆ ಆಗಿದ್ದರಿಂದ ಯಾತ್ರಾತ್ರಿಗಳು ಯಾತ್ರೆ ಮುಗಿಸಿರುವ ಸಾಧ್ಯತೆ ಹೆಚ್ಚಿದೆ. ತೀರ್ಥಹಳ್ಳಿ, ಶಿವಮೊಗ್ಗದವರಿಗೆ ತೊಂದರೆ ಆಗಿರಲು ಸಾಧ್ಯವಿಲ್ಲ. ಅವರೆಲ್ಲರೂ ಸೇಫ್‌  ಆಗಿ ಹಿಂದಿರುಗಿ ಬರಲಿ ಎಂದು ತಾಲ್ಲೂಕಿನ ಆಧಿ ದೇವತೆ ಶ್ರೀ ರಾಮೇಶ್ವರ ಅನುಗ್ರಹಿಸಬೇಕಿದೆ.

 

ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್‌ ಮಾಡಿ ಆಘಾತ ವ್ಯಕ್ತಪಡಿಸಿದ್ದಾರೆ. ಜಮ್ಮುಕಾಶ್ಮೀರದ ಲೆಫ್ಟಿನೆಂಟ್‌ ಗವರ್ನರ್‌ ಮನೋಜ್‌ ಸಿನ್ಹಾ ಅವರ ಜತೆಗೂ ಪ್ರಧಾನಿ ಮಾತನಾಡಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೂ ಮನೋಜ್ ಸಿನ್ಹಾ ಅವರ ಜತೆ ಮಾತನಾಡಿ ಮಾಹಿತಿ ಪಡೆದುಕೊಂಡಿ ದ್ದಾರೆ. ತ್ವರಿತ ರಕ್ಷಣಾ ಕಾರ್ಯಾಚರಣೆಗಾಗಿ ರಾಷ್ಟ್ರೀಯ ವಿಪತ್ತು ಸ್ಪಂದನಾ ಪಡೆ (ಎನ್‌ಡಿಆರ್‌ಎಫ್‌), ಕೇಂದ್ರ ಮೀಸಲು ಪೊಲೀಸ್ ಪಡೆ, ಗಡಿ ಭದ್ರತಾ ಪಡೆಯ ಸಿಬ್ಬಂದಿಯನ್ನು ಕಳುಹಿಸಲಾಗಿದೆ ಎಂದು ಶಾ ಅವರು ಟ್ವೀಟ್‌ ಮಾಡಿದ್ದಾರೆ. ಪರಿಸ್ಥಿತಿಯ ಮೇಲೆ ತೀವ್ರ ನಿಗಾ ಇರಿಸಲಾಗಿದ್ದು, ಯಾತ್ರಿಕರಿಗೆ ಎಲ್ಲ ನೆರವು ನೀಡಲಾಗುವುದು ಶಾ ಹೇಳಿದ್ದಾರೆ.

ತೀರ್ಥಯಾತ್ರಿಕರ 10 ಮೃತದೇಹಗಳು ದೊರೆತಿವೆ ಎಂದು ಎನ್‌ಡಿಆರ್‌ಎಫ್‌ ಅಧಿಕಾರಿಗಳು ತಿಳಿಸಿದ್ದಾರೆ. ಗಾಯಗೊಂಡವರನ್ನು ಹೆಲಿಕಾಪ್ಟರ್‌ಗಳ ಮೂಲಕ ಚಿಕಿತ್ಸೆಗೆ ಕರೆತರಲಾಗುತ್ತಿದೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಕಾಶ್ಮೀರ ಪೊಲೀಸ್‌ ಮಹಾ ನಿರೀಕ್ಷಕ ವಿಜಯ್‌ ಕುಮಾರ್‌ ಟ್ವೀಟ್‌ ಮಾಡಿದ್ದಾರೆ.

ಅಮರನಾಥ ಗುಹೆಯ ಮೇಲ್ಭಾಗ ಮತ್ತು ಬದಿಗ ಳಿಂದ ನೀರು ನುಗ್ಗಿದೆ ಎಂದು ಐಟಿಬಿಪಿ ಅಧಿಕಾರಿ ಯೊಬ್ಬರು ಹೇಳಿದ್ದಾರೆ. ಕೋವಿಡ್‌ ಸಾಂಕ್ರಾಮಿಕದಿಂದಾಗಿ ಕಳೆದ ಎರಡು ವರ್ಷ ಅಮರನಾಥ ಯಾತ್ರೆ ಸ್ಥಗಿತವಾಗಿತ್ತು. ಈ ವರ್ಷ ಜೂನ್‌ 30ರಂದು ಯಾತ್ರೆ ಆರಂಭವಾಗಿತ್ತು. ಪ್ರತಿಕೂಲ ಹವಾಮಾನದಿಂದಾಗಿ ಈ ವಾರದ ಆರಂಭದಲ್ಲಿ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿತ್ತು. ಈ ವರ್ಷ ಈ ವರೆಗೆ 72 ಸಾವಿರಕ್ಕೂ ಹೆಚ್ಚು ಮಂದಿ ಗುಹೆಯಲ್ಲಿ ಪೂಜೆ ಸಲ್ಲಿಸಿದ್ದಾರೆ.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post